logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ: ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
25 Jul 2022
post image

ಉಡುಪಿ, : ಜಿಲ್ಲೆಯ ನಾಲ್ಕು ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ-3 ಹುದ್ದೆ ಹಾಗೂ ಸಹಾಯಕಿಯರ-22 ಹುದ್ದೆಗಳಿಗೆ ಆಯ್ಕೆ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ವೆಬ್‌ಸೈಟ್ http://udupi.nic.in ರಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 35 ವರ್ಷದೊಳಗಿನ, ಎಸ್.ಎಸ್.ಎಲ್.ಸಿ ತೇರ್ಗಡೆಯಾದ ಮಹಿಳಾ ಅಭ್ಯರ್ಥಿಗಳು ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಹಾಗೂ ಕನಿಷ್ಠ 4 ನೇ ತರಗತಿ ತೇರ್ಗಡೆಯಾಗಿ ಗರಿಷ್ಠ 9 ನೇ ತರಗತಿ ವರೆಗೆ ವಿದ್ಯಾರ್ಹತೆ ಹೊಂದಿರುವ ಮಹಿಳಾ ಅಭ್ಯರ್ಥಿಗಳು ಅಂಗನವಾಡಿ ಸಹಾಯಕಿಯರ ಹುದ್ದೆಗೆ ಆಗಸ್ಟ್ 20 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಡುಪಿ ದೂ.ಸಂಖ್ಯೆ: 0820-2524055, ಬ್ರಹ್ಮಾವರ ದೂ.ಸಂಖ್ಯೆ: 0820-2562244, ಕುಂದಾಪುರ ದೂ.ಸಂಖ್ಯೆ: 08254-230807 ಹಾಗೂ ಕಾರ್ಕಳ ದೂ.ಸಂಖ್ಯೆ: 08258-230992 ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.