logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
12 Jul 2022
post image

ಉಡುಪಿ,: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಯೋಜನೆಯಡಿ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಖಾಲಿ ಇರುವ ಕ್ಲಿನಿಕಲ್ ಸೈಕೋಲಜಿಸ್ಟ್, ಪಿ ಆ್ಯಂಡ್ ಓ ಅಭಿಯಂತರ ಹಾಗೂ ಕಂಪ್ಯೂಟರ್ ಅಪರೇಟರ್ ತಲಾ 1 ಹುದ್ದೆಗಳಿಗೆ ಗೌರವಧನದ ಆಧಾರದಲ್ಲಿ ಕರ್ತವ್ಯ ನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕ್ಲಿನಿಕಲ್ ಸೈಕೋಲಜಿಸ್ಟ್ ಹುದ್ದೆಗೆ ಎಂ.ಎ ಇನ್ ಕ್ಲಿನಿಕಲ್ ಸೈಕೋಲಜಿ, ಪಿ ಆ್ಯಂಡ್ ಓ ಅಭಿಯಂತರರ ಹುದ್ದೆಗೆ ಪಿ ಆ್ಯಂಡ್ ಓ ಎಂಜಿನಿಯರಿAಗ್ ಪದವಿ ಅಥವಾ ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರುವ ಹಾಗೂ ಕಂಪ್ಯೂಟರ್ ಅಪರೇಟರ್ ಹುದ್ದೆಗೆ ಪಿ.ಯು.ಸಿ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜುಲೈ 27 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸದಸ್ಯ ಕಾರ್ಯದರ್ಶಿ, ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ರೆಡ್‌ಕ್ರಾಸ್ ಭವನ, ಅಜ್ಜರಕಾಡು, ಉಡುಪಿ ದೂರವಾಣಿ ಸಂಖ್ಯೆ : 0820-2533372 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.