



ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತುಂತುರು ನೀರಾವರಿ ಘಟಕದ ಸೌಲಭ್ಯ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರೈತರು ಜಮೀನಿನ ಆರ್.ಟಿ.ಸಿ, ಆಧಾರ್ ಪ್ರತಿ, ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಬ್ಯಾಂಕ್ ಖಾತೆ ಪುಸ್ತಕದ ಪ್ರತಿ, ನೀರಿನ ಮೂಲ ದೃಢೀಕರಣ ಪತ್ರ, ಜಾತಿ ಪ್ರಮಾಣ ಪತ್ರ ಹಾಗೂ 20 ರೂ. ಛಾಪಾ ಕಾಗದದೊಂದಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ರೈತರು ಸದ್ರಿ ಸೌಲಭ್ಯದ ಪ್ರಯೋಜನ ಪಡೆಯಲು ಪ್ರೂಟ್ಸ್ ಐಡಿ ಹೊಂದಿರುವುದು ಕಡ್ಡಾಯವಾಗಿದ್ದು, ಈಗಾಗಲೇ ಪ್ರೂಟ್ಸ್ ಐ.ಡಿ ಹೊಂದಿದ್ದಲ್ಲಿ ಅಥವಾ ಹೊಂದದೇ ಇದ್ದಲ್ಲಿ ತಮ್ಮ ಎಲ್ಲಾ ಆರ್.ಟಿ.ಸಿ ಗಳನ್ನು ಪ್ರೂಟ್ಸ್ ಐ.ಡಿಗೆ ಜೋಡಣೆ ಮಾಡಿಕೊಳ್ಳುವಂತೆ ಉಡುಪಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.