logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರೀಕರಿಗೆ ಅರ್ಜಿ ಆಹ್ವಾನ.!

ಟ್ರೆಂಡಿಂಗ್
share whatsappshare facebookshare telegram
5 Feb 2025
post image

ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಖರಣ ಇಲಾಖೆಯ ವತಿಯಿಂದ ಪಾಲಕರ ಪೋಷಣೆ, ಸಂರಕ್ಷಣೆ ಹಾಗೂ ಹಿರಿಯ ನಾಗರಿಕರ ರಕ್ಷಣಾ ಕಾಯ್ದೆ- 2007 ಮತ್ತು ಅಧಿನಿಯಮ- 2009 ರನ್ವಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಬೇಕಾಗಿರುತ್ತದೆ. ಈ ಸಭೆಗೆ ಪದಾಧಿಕಾರಿಗಳ ಆಯ್ಕೆಯಲ್ಲಿ ಇಬ್ಬರು ಹಿರಿಯ ನಾಗರಿಕರನ್ನು ನಾಮನಿರ್ದೇಶನ ಮಾಡಲು ಅರ್ಹ ಹಿರಿಯ ನಾಗರಿಕರಿಂದ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಇಬ್ಬರು ಸ್ವಯಂಸೇವಾ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಆಸಕ್ತ ಸ್ವಯಂಸೇವಾ ಪ್ರತಿನಿಧಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಫೆಬ್ರವರಿ 14 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್ ಡಿ.ಸಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2574810 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.