



ಉಡುಪಿ, : : ಬೆಂಗಳೂರು ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್ ತರಬೇತಿ ಸಂಸ್ಥೆಯ ವತಿಯಿಂದ, ಸಿ.ಎನ್.ಸಿ ಪ್ರೋಗ್ರಾಮರ್ ಕಮ್ ಆಪರೇಟರ್, ಎಲೆಕ್ಟಿçಷಿಯನ್, ವೆಲ್ಡರ್, ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್ ಟ್ರೇಡ್ ಹುದ್ದೆಗಳಿಗೆ ಒಂದು ವರ್ಷದ ಅಪ್ರೆಂಟಿಶಿಪ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಿಸಲಾಗಿದೆ. ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಶೇ.60 ಅಂಕಗಳೊAದಿಗೆ ಉತ್ತೀರ್ಣರಾಗಿರುವ ಸಾಮಾನ್ಯ ಹಾಗೂ ಒ.ಬಿ.ಸಿ ಅಭ್ಯರ್ಥಿಗಳು ಮತ್ತು ಶೇ.50 ಅಂಕಗಳೊAದಿಗೆ ಉತ್ತೀರ್ಣರಾಗಿರುವ ಎಸ್‌ಸಿ, ಎಸ್‌ಟಿ ಹಾಗೂ ಪಿಡಬ್ಲೂö್ಯಡಿ ಅಭ್ಯರ್ಥಿಗಳು ಏಪ್ರಿಲ್ 28 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಉಡುಪಿ ಮೊ.ನಂ: 9945856670, 8197440155 ಅನ್ನು ಸಂಪರ್ಕಿಸುವAತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.