


ಉಡುಪಿ: ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರಿಗೆ ಹೂಡಿಕೆ ಹೆಸರಿನಲ್ಲಿ ಸುಮಾರು ₹70 ಲಕ್ಷ ವಂಚನೆ ಮಾಡಿರುವ ಆರೋಪದ ಮೇಲೆ ಉಡುಪಿ ನಗರ ಪೊಲೀಸರು ಮಹಿಳೆಯೊಬ್ಬರನ್ನು ಬಂಧಿಸಿದ್ದಾರೆ.
ಬಂಧಿತೆಯನ್ನು ಝೀನತ್ ಇಬ್ರಾಹಿಂ ಎಂದು ಗುರುತಿಸಲಾಗಿದೆ. ರಿಯಲ್ ಎಸ್ಟೇಟ್ ಉದ್ಯಮಿಯೊಂದಿಗೆ ಪರಿಚಯ ಬೆಳೆಸಿಕೊಂಡಿದ್ದ ಆರೋಪಿ, ಜಂಟಿಯಾಗಿ ಕಚೇರಿ ಆರಂಭಿಸಿದ್ದಳು. ಬಳಿಕ ಜಮೀನು ಖರೀದಿ ಹೆಸರಿನಲ್ಲಿ ಉದ್ಯಮಿಯಿಂದ ₹70 ಲಕ್ಷ ಪಡೆದು, ಅದನ್ನು ವೈಯಕ್ತಿಕ ಉದ್ದೇಶಗಳಿಗೆ ಬಳಸಿಕೊಂಡಿದ್ದಾಳೆ ಎಂದು ಆರೋಪಿಸಲಾಗಿದೆ.
ಉದ್ಯಮಿ ಹಣವನ್ನು ಹಿಂದಿರುಗಿಸುವಂತೆ ಕೇಳಿದಾಗ, ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಲ್ಲದೆ, ಅಶ್ಲೀಲ ವಿಡಿಯೋಗಳ ಹೆಸರಿನಲ್ಲಿ ನಿರಂತರವಾಗಿ ಬ್ಲ್ಯಾಕ್‌ಮೇಲ್ ಮಾಡಿದ್ದಾಳೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ, ಉದ್ಯಮಿಯ ಪತ್ನಿ ಮತ್ತು ಮಕ್ಕಳನ್ನು ಅಪಹರಿಸಿ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿರುವ ಆರೋಪವೂ ಕೇಳಿಬಂದಿದೆ.
ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿತ ಆರೋಪಿಯನ್ನು ನ್ಯಾಯಾಲಯ ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.