logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಹೆಚ್ಚು ಬಾರಿ ರಕ್ತದಾನ ಮಾಡಿರುವ ದಾನಿಗಳಿಗೆ ಪುರಸ್ಕಾರ - ಅರ್ಜಿ ಆಹ್ವಾನ.

ಟ್ರೆಂಡಿಂಗ್
share whatsappshare facebookshare telegram
18 May 2024
post image

ಉಡುಪಿ, ಮೇ 18: ಎ, ಬಿ ಮತ್ತು ಒ ರಕ್ತದ ಗುಂಪನ್ನು ಕಂಡುಹಿಡಿದ ಡಾ. ಕಾರ್ಲ್ ಲ್ಯಾಂಡ್ ಸ್ಟೇನಿಯರ್‌ರವರ ಹುಟ್ಟುಹಬ್ಬವನ್ನು ಸ್ಮರಿಸಿ ಪ್ರತಿ ವರ್ಷ ಜೂನ್ 14 ರಂದು ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಕರ್ನಾಟಕ ರಾಜ್ಯ ರೆಡ್ ಕ್ರಾಸ್ ಸಂಸ್ಥೆಯು ಹಮ್ಮಿಕೊಳ್ಳುವ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಕನಿಷ್ಠ ಇಪ್ಪತ್ತೈದಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿರುವ ದಾನಿಗಳನ್ನು ಹಾಗೂ ಜಿಲ್ಲಾ ಘಟಕದಿಂದ ಕನಿಷ್ಠ 15 ಬಾರಿ ಮೇಲ್ಪಟ್ಟು ರಕ್ತದಾನ ಮಾಡಿರುವ ದಾನಿಗಳನ್ನು ಗುರುತಿಸಿ ಈ ಸಂದರ್ಭದಲ್ಲಿ ಗೌರವಿಸಿ ಸನ್ಮಾನಿಸಲಾಗುವುದು. ಆದ್ದರಿಂದ ರಕ್ತದಾನಿ ಅಥವಾ ಅವರಿಗೆ ಸಂಬಂಧಿಸಿದವರು ರಕ್ತದಾನಕ್ಕೆ ಸಂಬಂಧಿಸಿದ ಪ್ರಮಾಣ ಪತ್ರಗಳ ದಾಖಲೆಯ ಪ್ರತಿ, ವಿಳಾಸ ಹಾಗೂ ಮೊಬೈಲ್ ಸಂಖ್ಯೆಗಳ ವಿವರಗಳೊಂದಿಗೆ ಮೇ 23 ರ ಒಳಗಾಗಿ ಗೌರವ ಕಾರ್ಯದರ್ಶಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕ, ರೆಡ್ ಕ್ರಾಸ್ ಭವನ, ಬ್ರಹ್ಮಗಿರಿ ಉಡುಪಿ ಇವರಿಗೆ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.