logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ - ವಿಶ್ವ ಯೋಗ ದಿನಾಚರಣೆ.

ಟ್ರೆಂಡಿಂಗ್
share whatsappshare facebookshare telegram
22 Jun 2024
post image

ಉಡುಪಿ: ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಇದರ ವತಿಯಿಂದ ಶುಕ್ರವಾರ ವಿಶ್ವ ಯೋಗ ದಿನಾಚರಣೆಯನ್ನು ಜಗನ್ನಾಥ ಸಭಾಭವನದಲ್ಲಿ ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿ ಇಂದ್ರಾಳಿ ಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬ್ಲಿಸ್ ಯೋಗ ತರಬೇತಿ ಕೇಂದ್ರದ ತರಬೇತುದಾರರಾದ ಶ್ರೀಮತಿ ಸುಮನ ಶ್ರೀನಿವಾಸ್ ಯೋಗ ತರಬೇತಿಯನ್ನು ನಡೆಸಿಕೊಟ್ಟರು. ಯೋಗದಿಂದ ಅರೋಗ್ಯ ರಕ್ಷಣೆ ಕುರಿತು ಮಾಹಿತಿ ನೀಡಿದರು. ಇವರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಪ್ರತಿಮ ವಿ. ಎಸ್ ಇವರು ವಿವಿಧ ಬಗೆಯ ಯೋಗ ಪ್ರತ್ಯಕ್ಷತೆಯನ್ನು ನೀಡಿ ಸಹಕರಿಸಿದರು. ವೇದಿಕೆಯಲ್ಲಿ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕರಾದ ಶ್ರೀ ರಾಜೇಶ್ ವಿ. ಶೇರಿಗಾರ್, ನಿರ್ದೇಶಕರಾದ ಎಲ್ ಉಮಾನಾಥ್,

ಶ್ರೀಮತಿ ಜಯ ಶೆಟ್ಟಿ ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಶ್ರೀ ಪ್ರವೀಣ್ ಕುಮಾರ್ , ಲೆಕ್ಕಿಗರಾದ ಶ್ರೀ ಅಶ್ವಿನಿ ಕುಮಾರ್ ಹಾಗೂ ಎಲ್ಲಾ ಶಾಖಾ ವ್ಯವಸ್ಥಾಪಕರು, ಸಿಬ್ಬಂದಿಗಳು ಮತ್ತು ದೈನಿಕ ಠೇವಣಿ ಸಂಗ್ರಹಾಕರು, ಉಪಸ್ಥಿತರಿದ್ದರು. ಮಲ್ಪೆ ಶಾಖಾ ವ್ಯವಸ್ಥಾಪಕರಾದ ಶ್ರೀ ನವೀನ್ ಕೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.