logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಬಾಲಗೌರವ ಪ್ರಶಸ್ತಿ: ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
5 Nov 2023
post image

ಉಡುಪಿ: ರಾಜ್ಯ ಬಾಲವಿಕಾಸ ಅಕಾಡೆಮಿಯ ವತಿಯಿಂದ ರಾಜ್ಯ, ರಾಷ್ಟ್ರ ಮತ್ತು ಅಂತರ್ ರಾಷ್ಟ್ರ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದೊಳಗಿನ ಮಕ್ಕಳಿಂದ “ಬಾಲಗೌರವ ಪ್ರಶಸ್ತಿ” ಗೆ ಅರ್ಜಿ ಆಹ್ವಾನಿಸಲಾಗಿದೆ.

ಮಕ್ಕಳು ಕ್ರೀಡೆ, ಸಂಗೀತ, ನೃತ್ಯ, ಬಹುಮುಖ ಪ್ರತಿಭೆ, ಚಿತ್ರಕಲೆ ಹಾಗೂ ವಿಜ್ಞಾನ ಮತ್ತು ಸಂಶೋಧನೆಯ ಕ್ಷೇತ್ರಗಳಲ್ಲಿ ಅಸಾಧಾರಣಾ ಸಾಧನೆಯನ್ನು ಮಾಡಿ ಪ್ರಶಸ್ತಿ ಪಡೆದ ಪುರಸ್ಕೃತ ಮಗುವಾಗಿರಬೇಕು. ಇಂತಹ ಮಕ್ಕಳು ಸ್ವಯಂ ದೃಢೀಕೃತ ನಕಲು, ಸ್ವ-ವಿವರಗಳನ್ನೊಳಗೊಂಡ ಮನವಿಯೊಂದಿಗೆ ಅರ್ಜಿಯನ್ನು ನವೆಂಬರ್ 18 ರ ಒಳಗಾಗಿ ಯೋಜನಾಧಿಕಾರಿಗಳು, ಕರ್ನಾಟಕ ಬಾಲವಿಕಾಸ ಅಕಾಡೆಮಿ, ಚಂದ್ರಿಕಾ ಲೇ-ಔಟ್ ಹಿಂಭಾಗ, ಕೆ.ಹೆಚ್.ಬಿ ಕಾಲೋನಿ, ಲಕಮನಹಳ್ಳಿ, ಧಾರವಾಡ-580004 ಇಲ್ಲಿಗೆ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://balavikasaacademy.karnataka.gov.in ಹಾಗೂ ದೂ.ಸಂ:0836-2461666 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.