logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ : ಬ್ಯಾಂಕ್ ಉದ್ಯೋಗಿ ಕುಸಿದು ಬಿದ್ದು ಸಾವು

ಟ್ರೆಂಡಿಂಗ್
share whatsappshare facebookshare telegram
2 Nov 2021
post image

ಉಡುಪಿ: ಬ್ಯಾಂಕ್ ಉಸ್ಯೋಕುಸಿದು ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಉಡುಪಿಯ ಬೈಲಕೆರೆಯ ಅಪಾರ್ಟ್ಮೆಂಟ್ ಒಂದರಲ್ಲಿ ನಡೆದಿದೆ.

ಬ್ಯಾಂಕ್ ಉದ್ಯೋಗಿಯಾಗಿರುವ ಗುರುಪ್ರಸಾದ್ ರಾವ್(43) ಮೃತಪಟ್ಟವರು. ಇವರು ನಿನ್ನೆ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಗಂಟಲು ಉರಿ ಬರುತ್ತಿರುವುದಾಗಿ ತಾಯಿಯಲ್ಲಿ ಹೇಳಿದ್ದರು. ಮುಂಜಾನೆ 3 ಗಂಟೆ ಸುಮಾರಿಗೆ ತಾನು ವಾಸವಿದ್ದ ಫ್ಲ್ಯಾಟಿನಲ್ಲಿ ಹಠಾತ್ ಕುಸಿದು ಬಿದ್ದವರನ್ನು ಚಿಕಿತ್ಸೆಗಾಗಿ ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋಗಿದ್ದು, ಆಸ್ಪತ್ರೆಯಲ್ಲಿ ಅವರನ್ನು ಪರೀಕ್ಷಿಸಿದ ವೈದ್ಯರು ಅವರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಅದರಂತೆ ಗುರು ಪ್ರಸಾದ್ ರಾವ್ ಅವರು, ಹೃದಯಾಘಾತದಿಂದಲೋ ಅಥವಾ ಇನ್ನಾವುದೋ ಖಾಯಿಲೆಯಿಂದ ಮೃತಪಟ್ಟಿರುವುದಾಗಿ ಮೃತರ ಅಕ್ಕ ಜ್ಯೋತಿ ಜಿ. ನಾಯಕ್ ಅವರು ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.