logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ ಮೂಲದ ವ್ಯಕ್ತಿ ಮುಂಬೈನಲ್ಲಿ ರಸ್ತೆ ಅಪಘಾತದಲ್ಲಿ ಮೃತ್ಯು

ಟ್ರೆಂಡಿಂಗ್
share whatsappshare facebookshare telegram
23 Oct 2021
post image

ಮುಂಬೈ: ಏಳು ವರ್ಷಗಳಿಂದ ಮುಂಬೈ‌ನ ಶಿಪ್ ಯಾರ್ಡ್‌ನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ, ಉಡುಪಿ ಕೊಳಲಗಿರಿ ಮೂಲದ ರೋಶನ್ ಡಿ ಸೋಜಾ(33) ಎಂಬುವವರು ಮಹಾರಾಷ್ಟ್ರದ ಚೆಂಬೂರ್‌ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇವರು ನಿನ್ನೆ ರಾತ್ರಿ 10 ಗಂಟೆಗೆ ಕೆಲಸ ಮುಗಿಸಿ ಮನೆಗೆ ತನ್ನ ಬೈಕಿನಲ್ಲಿ ಬರುತ್ತಿದ್ದ ವೇಳೆ ಹಿಂಬದಿಯಿಂದ ಟ್ರಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಇವರ ಮೃತದೇಹವನ್ನು ಮುಂಬೈನಿಂದ ಊರಿಗೆ ತರಲಾಗುತ್ತಿದೆ. ಅ.23ರ ಸಂಜೆ 4 ಗಂಟೆಗೆ ಕೊಳಲಗಿರಿಯ ಸೇಕ್ರೆಡ್ ಹಾರ್ಟ್ ಚರ್ಚ್‌ನಲ್ಲಿ ಅಂತಿಮ ವಿಧಿವಿಧಾನಗಳು ನಡೆಯಲಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.