



ಉಡುಪಿ, :ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ನಗರಸಭೆ ಹಾಗೂ ಪರಿಶಿಷ್ಟ ಜಾತಿ/ ಪ.ವರ್ಗಗಳ ಸಂಘಟನೆಗಳು ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಡಾ.ಬಾಬು ಜಗಜೀವನರಾಂ ರವರ 115 ನೇ ಜನ್ಮದಿನೋತ್ಸವದ ಆಚರಣಾ ಸಮಾರಂಭವು ಏಪ್ರಿಲ್ 5 ರಂದು ಬೆಳಗ್ಗೆ 10 ಗಂಟೆಗೆ ಉಡುಪಿ ಕುಂಜಿಬೆಟ್ಟು ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.