logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಬಾಲ ಗೌರವ ಪ್ರಶಸ್ತಿ: ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
25 Mar 2022
post image

ಉಡುಪಿ,: ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ವತಿಯಿಂದ ರಾಜ್ಯ ಮತ್ತು ರಾಷ್ಟçಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಗೆ ಬಾಲಗೌರವ ಪ್ರಶಸ್ತಿ ಹಾಗೂ ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಕ್ರೀಡಾ, ನೃತ್ಯ, ಸಂಗೀತ, ಸಾಹಿತ್ಯ, ಕರಕುಶಲ, ಚಿತ್ರಕಲೆ ಕ್ಷೇತ್ರಗಳಲ್ಲಿ ಹಾಗೂ ಬಹುಮುಖ ಪ್ರತಿಭೆ, ನಾಟಕ ಕ್ಷೇತ್ರದಂತಹ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಪ್ರಶಸ್ತಿ ಪುರಸ್ಕೃತ ಮಕ್ಕಳು ಸ್ವಯಂ ದೃಢೀಕೃತ ನಕಲು, ಸ್ವವಿವರ, ದಾಖಲೆಗಳೊಂದಿಗೆ ಹಾಗೂ 2021 ರ ಜನವರಿಯಿಂದ ಡಿಸೆಂಬರ್‌ವರೆಗೆ ಪ್ರಕಟಗೊಂಡ ಸ್ವ-ರಚಿತ ಮಕ್ಕಳ ಸಾಹಿತ್ಯದ ಕೃತಿಗಳ (ಮಕ್ಕಳೇ ರಚಿಸಿದ) 4 ಪ್ರತಿಯೊಂದಿಗೆ ಮಾರ್ಚ್ 31 ರ ಒಳಗೆ ಯೋಜನಾಧಿಕಾರಿಗಳು, ಕರ್ನಾಟಕ ಬಾಲವಿಕಾಸ ಅಕಾಡೆಮಿ, ಚಂದ್ರಿಕಾ ಲೇ-ಔಟ್ ಹಿಂಭಾಗ, ಕೆ.ಹೆಚ್.ಬಿ ಕಾಲೋನಿ, ಲಕಮನಹಳ್ಳಿ, ಧಾರವಾಡ-580004 ವಿಳಾಸಕ್ಕೆ ಕಳುಹಿಸಬೇಕು. ಅರ್ಜಿ ಸಲ್ಲಿಸುವಾಗ ಅಕಾಡೆಮಿ ಬಾಲಗೌರವ ಪ್ರಶಸ್ತಿ ಅರ್ಜಿ ಎಂದು ಲಕೋಟೆ ಮೇಲೆ ನಮೂದಿಸಿರಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ:0836-2461666 ನ್ನು ಸಂಪರ್ಕಿಸುವAತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.