



ಉಡುಪಿ: ಉಡುಪಿ ನಗರದ ಅಜ್ಜರಕಾಡು ಎಂಬಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.23 ಸಂಜೆ ವೇಳೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಅಜ್ಜರಕಾಡು ನಿವಾಸಿ ಸರಿಟ ವೇಗಸ್ ಹಾಗೂ ಮನೋಹರ್ ವೇಗಸ್ ದಂಪತಿ ಪುತ್ರ ತುಷಾರ್ ವೇಗಾಸ್ (17) .
ಉಡುಪಿಯ ಎಂ.ಜಿ.ಎಂ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ಯಾಗಿದ್ದ ತುಷಾರ್, ಕಾಲೇಜಿನಿಂದ ಮನೆಗೆ ಬಂದು ರೂಮಿನಲ್ಲಿ ಮಲಗಿದ್ದು, ಈ ವೇಳೆ ತುಷಾರ್ ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ತುಷಾರ್ ಯಾವುದೋ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.