logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಉಡುಪಿ: ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸಿ - ಜಿಲ್ಲಾಧಿಕಾರಿ

ಟ್ರೆಂಡಿಂಗ್
share whatsappshare facebookshare telegram
27 Jun 2024
post image

ಉಡುಪಿ: ಜಿಲ್ಲೆಯ ಏಳು ಪರೀಕ್ಷಾ ಕೇಂದ್ರದಲ್ಲಿ ಜೂನ್ 30 ರಂದು ನಡೆಯಲಿರುವ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ನಡೆಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಜೂ.೨೬ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಟಿ.ಇ.ಟಿ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಶಿಕ್ಷಕರಾ ಅರ್ಹತಾ ಪರೀಕ್ಷೆಯು ಜೂನ್ 30 ರಂದು ಜಿಲ್ಲೆಯ ಏಳು ಪರೀಕ್ಷಾ ಕೇಂದ್ರದಲ್ಲಿ ನಡೆಯುತ್ತಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್‌ಚ್ಛಕ್ತಿಯಿಂದ ಬೆಳಕಿನ ವ್ಯವಸ್ಥೆ ಸೇರಿದಂತೆ ಮತ್ತಿತರ ಸೌಲಭ್ಯಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಮೊದಲ ಅಧಿವೇಶನ ಬೆಳಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ನಡೆಯಲಿದ್ದು, ಒಟ್ಟು 960 ಅಭ್ಯರ್ಥಿಗಳು ಹಾಗೂ ಅಪರಾಹ್ನ 2 ರಿಂದ 4.30 ರ ವರೆಗೆ ಎರಡನೇ ಅಧಿವೇಶನ ನಡೆಯಲಿದ್ದು, ಒಟ್ಟು 1653 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು. ಪರೀಕ್ಷಾ ಕೇಂದ್ರಗಳಿಗೆ ಅಭ್ಯರ್ಥಿ ಸೇರಿದಂತೆ ಯಾರೊಬ್ಬರಿಗೂ ಮೊಬೈಲ್, ಬ್ಲೂಟೂತ್ ಸೇರಿದಂತೆ ಮತ್ತಿತರ ಯಾವುದೇ ಎಲೆಕ್ಟಾçನಿಕ್ ಉಪಕರಣಗಳನ್ನು ಕೊಂಡೊಯ್ಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದ ಅವರು, ಪ್ರತಿಯೊಂದು ಪರೀಕ್ಷಾ ಕೊಠಡಿಗೂ ಸಿ.ಸಿ.ಟಿ.ವಿ ಆಳವಡಿಸಬೇಕು ಎಂದು ಸೂಚನೆ ನೀಡಿದರು. ಪರೀಕ್ಷೆ ನಡೆಯುವ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತಿದೆ ಎಂದ ಅವರು, ಪರೀಕ್ಷಾ ಅವಧಿಯಲ್ಲಿ ಸಮಯ ಪರಿಪಾಲನೆ ಅತೀ ಮುಖ್ಯವಾಗಿರುವ ಹಿನ್ನೆಲೆ, ಪರೀಕ್ಷಾ ಕೊಠಡಿಯಲ್ಲಿ ಗೋಡೆ ಗಡಿಯಾರವನ್ನು ತಪ್ಪದೇ ಅಳವಡಿಸಬೇಕು. ಪರೀಕ್ಷಾ ಸಮಯದಲ್ಲಿ ಯಾವುದೇ ಅವ್ಯವಹಾರ ನಡೆಯದಂತೆ ಎಚ್ಚರವಹಿಸಬೇಕು ಎಂದು ಸೂಚನೆ ನೀಡಿದರು.

ಪರೀಕ್ಷಾ ಕೇಂದ್ರದ ಸುತ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ, ಸೂಕ್ತ ಆರೋಗ್ಯ ತಪಾಸಣಾ ವ್ಯವಸ್ಥೆ ಸೇರಿದಂತೆ ಮತ್ತಿತರ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಲು ಸೂಚನೆ ನೀಡಲಾಯಿತು. ಪರೀಕ್ಷಾ ಗೌಪ್ಯ ಸಾಮಾಗ್ರಿಗಳನ್ನು ಜಿಲ್ಲಾ ಖಜಾನೆಯಿಂದ ಪಡೆದು ಪರೀಕ್ಷಾ ಕೆಂದ್ಗಳಿಗೆ ಸಾಗಿಸುವಾಗ ಹಾಗೂ ಪರೀಕ್ಷಾ ಕೇಂದ್ರಗಳಿಂದ ಗೌಪ್ಯ ಸಾಮಾಗ್ರಿಗಳನ್ನು ಪಡೆದು ಸಾಗಿಸುವಾಗ ಭದ್ರತಾ ಸಿಬ್ಬಂದಿ ಕಡ್ಡಾಯವಾಗಿ ಹಾಜರಿರಬೇಕು. ಈ ಸಾಮಾಗ್ರಿಗಳನ್ನು ಜಿಲ್ಲಾ ಖಜಾನೆಯಿಂದ ಅಭಿರಕ್ಷಿಸಿ ಇಡಬೇಕೆಂದರು. ಅಭ್ಯರ್ಥಿಗಳು ಪರೀಕ್ಷಾ ಕೊಠಡಿಗೆ ಪರೀಕ್ಷೆ ಆರಂಭಕ್ಕೂ ಮುನ್ನಾ ಅರ್ಧ ಗಂಟೆ ಮುಂಚಿತವಾಗಿ ಪ್ರವೇಶ ಪಡೆಯಬೇಕು. ಪ್ರವೇಶ ದ್ವಾರ ಹಾಗೂ ಪರೀಕ್ಷಾ ಕೊಠಡಿಗೆ ಪ್ರವೇಶಿಸುವ ಮುನ್ನಾ ಅಭ್ಯರ್ಥಿಗಳನ್ನು ತಪಾಸಣೆ ಮಾಡಬೇಕು ಎಂದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಡಿಡಿಪಿಐ ಗಣಪತಿ ಕೆ, ಜಿಲ್ಲಾ ಖಜಾನಾಧಿಕಾರಿ ಗೋಪಾಲಸ್ವಾಮಿ, ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.