



ಉಡುಪಿ,: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಜಿಲ್ಲೆಯ ಮುಂಗಾರು ಹಂಗಾಮಿನ ಮುಖ್ಯ ಬೆಳೆಯಾದ ಭತ್ತವನ್ನು ಗ್ರಾಮ ಪಂಚಾಯತ್ ಹಾಗೂ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ, ಪ್ರತಿ ಹೆ.ಗೆ ವಿಮಾ ಮೊತ್ತ 55,000 ರೂ. ಗಳಿಗೆ, 1100 ರೂ. ವಿಮಾ ಕಂತಿನ ದರವನ್ನು ನಿಗಧಿಪಡಿಸಲಾಗಿದ್ದು, ರೈತರು ಬೆಳೆ ವಿಮೆ ಯೋಜನೆಯಡಿ ನೋಂದಣಿ ಮಾಡಿಸಿಕೊಳ್ಳಲು ಜುಲೈ 31 ಕೊನೆಯ ದಿನ. ಬೆಳೆ ಸಾಲ ಪಡೆಯದ ರೈತರು ಪಹಣಿ ಪತ್ರ, ಬ್ಯಾಂಕ್ ಖಾತೆ ಅಥವಾ ಪಾಸ್ ಪುಸ್ತಕ, ಕಂದಾಯ ರಸೀದಿ ಮತ್ತು ಆಧಾರ್ ಸಂಖ್ಯೆಗಳನ್ನು ಒದಗಿಸಿ, ಸ್ಥಳೀಯ ಸಾಲ ನೀಡುವ ವಾಣಿಜ್ಯ ಅಥವಾ ಗ್ರಾಮೀಣ ಮಟ್ಟದ ವ್ಯವಸಾಯ ಸೇವಾ ಸಹಕಾರ ಸಂಘ, ಸಾರ್ವಜನಿಕ ಸೇವಾ ಕೇಂದ್ರ, ವಿಮಾ ಸಂಸ್ಥೆಗಳಲ್ಲಿ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಕೃಷಿ ಇಲಾಖೆಯ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.