



ಉಡುಪಿ: ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾದ ಘಟನೆ ಉಡುಪಿ ಕಲ್ಸಂಕ ಸಮೀಪದ ಬಡಗುಪೇಟೆ ರಸ್ತೆಯ ಅಪಾರ್ಟ್ ಮೆಂಟ್ ವೊಂದರಲ್ಲಿ ಇಂದು ರಾತ್ರಿ ಸಂಭವಿಸಿದೆ.
ಗ್ಯಾಸ್ ಸಿಲಿಂಡರ್ ಲೀಕ್ ಆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಮೂರು ಅಂತಸ್ತಿನ ಅಪಾರ್ಟ್ ಮೆಂಟ್ ನ ಮೂರನೇ ಮಹಡಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಕಾರ್ಮಿಕರು ಪಾರ್ಟಿ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಗ್ಯಾಸ್ ಸಿಲಿಂಡರ್ ಲೀಕ್ ಆಗಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಕೊಠಡಿಯಲ್ಲಿ ಪಾರ್ಟಿ ಮಾಡುತ್ತಿದ್ದವರು ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಬಳಿಕ ಅಗ್ನಿ ಶಾಮಕ ಇಲಾಖೆಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಬಂದ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಸಂಭವನೀಯ ಅನಾಹುತವೊಂದನ್ನು ತಪ್ಪಿಸಿದ್ದಾರೆ.
ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಮನೆಯಲ್ಲಿದ್ದ ಸೊತ್ತುಗಳು ಸುಟ್ಟು ಕರಕಲಾಗಿದ್ದು, ಅಪಾರ ಪ್ರಮಾಣದ ಹಾನಿಯುಂಟಾಗಿದೆ ಎಂದು ತಿಳಿದುಬಂದಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.