logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ:ಮನೆಗೆ ನುಗ್ಗಿ ನಗರಸಭೆಯ ಮಾಜಿ ಅಧ್ಯಕ್ಷೆಯ ಪತಿಗೆ ಮಾರಣಾಂತಿಕ ಹಲ್ಲೆ

ಟ್ರೆಂಡಿಂಗ್
share whatsappshare facebookshare telegram
15 Dec 2022
post image

ಉಡುಪಿ:

ಮನೆಯೊಂದಕ್ಕೆ ನುಗ್ಗಿದ ಯುವಕನೋರ್ವ ನಗರಸಭೆಯ ಮಾಜಿ ಅಧ್ಯಕ್ಷೆಯ ಪತಿಗೆ ಕಬ್ಬಿಣದ ಸಾಲಕೆಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಇಂದ್ರಾಳಿಯಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷೆ ಶಾಂತಾ ನಾಯಕ್ ಅವರ ಪತಿ 54ವರ್ಷದ ಕೃಷ್ಣ ನಾಯಕ್ ಎಂಬವರು ಹಲ್ಲೆಗೊಳಗಾದ ವ್ಯಕ್ತಿ. ನೆರೆಮನೆಯ ನಿವಾಸಿ 23ವರ್ಷದ ಅರ್ಜುನ್ ಹಲ್ಲೆಗೈದ ಆರೋಪಿ. ಕೃಷ್ಣ ಎಂಬಾವರು ಗುರಾಯಿಸಿ ನೋಡಿದರೆಂಬ ಕಾರಣಕ್ಕೆ ಆರೋಪಿ ಅರ್ಜುನ್ ಈ ಕೃತ್ಯ ನಡೆಸಿದ್ದಾನೆ ಎನ್ನಲಾಗಿದೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ಕೃಷ್ಣ ಅವರನ್ನು ಕೂಡಲೇ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಭೇಟಿ ನೀಡಿದ ಮಣಿಪಾಲ ಠಾಣೆಯ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.