



ಉಡುಪಿ: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಮೊರಾರ್ಜಿ ದೇಸಾಯಿ, ಇಂದಿರಾಗಾAಧಿ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ನಾರಾಯಣ ಗುರು ವಸತಿ ಶಾಲೆಗಳಲ್ಲಿ 6 ನೇ ತರಗತಿ ಪ್ರವೇಶಾತಿಗೆ ವಿಶೇಷ ವರ್ಗದ ಮಕ್ಕಳಿಗೆ ಪ್ರವೇಶ ಪರೀಕ್ಷೆ ಇಲ್ಲದೇ ನೇರ ಪ್ರವೇಶ ಪಡೆಯಲು ಇಲಾಖಾ ವೆಬ್‌ಸೈಟ್ https://cetonlin.karnataka.gov.in/kreis24d/Forms/onlineregister.aspx ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿಶೇಷ ವರ್ಗದ ಅಡಿಯಲ್ಲಿ ಬರುವ ಸಮುದಾಯಗಳು : ಸಫಾಯಿ ಕರ್ಮಚಾರಿಗಳ ಮಕ್ಕಳು, ಚಿಂದಿ ಆಯುವವರ ಮಕ್ಕಳು, ಸ್ಮಶಾನ ಕಾರ್ಮಿಕರ ಮಕ್ಕಳು, ಬಾಲ ಕಾರ್ಮಿಕ ಕೆಲಸದಿಂದ ರಕ್ಷಿಸಲ್ಪಟ್ಟ ಮಕ್ಕಳು, ಜೀತದಾಳುಗಳ ಮಕ್ಕಳು, ಮಾಜಿ ದೇವದಾಸಿಯರ ಮಕ್ಕಳು, ಶೇ. 25 ಕ್ಕಿಂತ ಹೆಚ್ಚು ಅಂಗವೈಕಲ್ಯ ಹೊಂದಿದ ಮಕ್ಕಳು, ಹೆಚ್.ಐ.ವಿ ಪೀಡಿತ ಪಾಲಕರ ಮಕ್ಕಳು, ಒಂಟಿ ತಾಯಂದಿರ ಮಕ್ಕಳು, ಅನಾಥ ಮಕ್ಕಳು, ಅಲೆಮಾರಿ ಸಮುದಾಯದ ಮಕ್ಕಳು, ಸಕಾರಿ ಯೋಜನೆಗಳಿಂದ ಸ್ಥಳಾಂತರಗೊAಡವರ ಮಕ್ಕಳು, ಸೇವೆ ಸಲ್ಲಿಸುತ್ತಿರುವ ಅಥವಾ ನಿವೃತ್ತಗೊಂಡ ಸೇನಾ ಸಿಬ್ಬಂದಿ ಮಕ್ಕಳು, ಗಿರಿಜನ ವಸತಿ ಶಾಲೆಗಳಲ್ಲಿ 5 ನೇ ತರಗತಿಯವರೆಗೆ ಓದಿದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಹಾಗೂ ಆಶ್ರಮ ಶಾಲೆ ವಿದ್ಯಾರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ವಿಶೇಷ ವರ್ಗದ ಅಡಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಮನ್ವಯಾಧಿಕಾರಿಗಳು, ಕ್ರೆöÊಸ್ ಉಡುಪಿ ಮೊ.ನಂ: 9482625925 ಹಾಗೂ ಹಿರೇಬೆಟ್ಟು ಮೊ.ದೇ.ವ.ಶಾ. ಪ್ರಾಂಶುಪಾಲರು ಮೊ.ನಂ: 7975115073 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.