



ಉಡುಪಿ: ರಷ್ಯಾ ಮತ್ತು ಉಕ್ರೇನ್ ದೇಶಗಳ ನಡುವೆ ಯುದ್ದ ನಡೆಯುವ ಸಂಭವವಿದ್ದು, ಈ ಸಂದರ್ಭದಲ್ಲಿ ಉಕ್ರೇನ್ ದೇಶಗಳಲ್ಲಿ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರ ಉದ್ದೇಶಗಳಿಗೆ ವಾಸವಾಗಿರುವ, ಜಿಲ್ಲೆಗೆ ಸಂಬಂಧಪಟ್ಟ ಭಾರತದ ಪ್ರಜೆಗಳಿದ್ದಲ್ಲಿ, ಅವರ ಬಗ್ಗೆ ಮಾಹಿತಿ ಕಲೆ ಹಾಕುವ ಅವಶ್ಯಕತೆ ಇದ್ದು, ಅಂತಹವರ ಮಾಹಿತಿಯನ್ನು ಸಂಬಂಧಿಸಿರುವವರು ಜಿಲ್ಲಾಧಿಕಾರಿಯವರ ಕಚೇರಿ, ರಜತಾದ್ರಿ ಮಣಿಪಾಲದಲ್ಲಿ ತೆರೆದಿರುವ ಕಂಟ್ರೋಲ್ ರೂಂ. ಸಂಖ್ಯೆ :1077 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.