



ಉಡುಪಿ: ಇಂದು ನಡೆದ ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಉಡುಪಿ ತಾಲೂಕಿನ 80 ಬಡಗಬೆಟ್ಟು ಗ್ರಾಮದ ಮಾಧವ ವಾಗ್ಲೆ ರವರು 5 ಸೆಂಟ್ಸ್ ಜಮೀನಿನಲ್ಲಿ ಹಳೆಯ ಮನೆ ಹೊಂದಿದ್ದು, ತಮ್ಮ ಹೆಸರಿಗೆ ಖಾತೆ,ಪಹಣಿ ಹೊಂದಿ ಅಲ್ಲಿಯೇ ವಾಸಿಸುತ್ತಿದ್ದು, ಮನೆಯ ರಿಪೇರಿಗೆ ಸ್ಥಳೀಯ ಗ್ರಾಮ ಪಂಚಾಯತಿಗೆ ಅರ್ಜಿ ಕೋರಿ, ಸಲ್ಲಿಸಿದಾಗ ಅರಣ್ಯ ಇಲಾಖೆಯವರು ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ಬರುತ್ತದೆ ಎಂದು ಆಕ್ಷೇಪಣೆ ಇದೆ ಎಂದು ಅನುಮತಿ ನೀಡಿರುವುದಿಲ್ಲ ಎಂದು ತಮ್ಮ ಸಮಸ್ಯೆಯನ್ನು ಅಹವಾಲು ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಿದಾಗ, ಅಲ್ಲಿಯೇ ಇದ್ದ ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಕ್ಲಿಫರ್ಡ್ ಲೋಬೋ ರವರಿಗೆ ಇಂದೇ ಮಧ್ಯಾಹ್ನ ಸ್ಥಳ ಭೇಟಿ ಮಾಡಿ, ಪರಿಶೀಲಿಸಿ, ವರದಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೂಚನೆ ನೀಡಿದರು. ಅದರನ್ವಯ ಅರಣ್ಯ ಸಂರಕ್ಷಣಾ ಅಧಿಕಾರಿ ಹಾಗೂ ಅರ್ಜಿದಾರರು ಸ್ಥಳ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.