



.ಉಡುಪಿ: ಏಪ್ರಿಲ್ 14 ,15 ,16 ರಂದು ಕುಂದಾಪುರದಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಪರಿಷತ್ತು , ಉಡುಪಿ ಜಿಲ್ಲೆಯ ಉಡುಪಿ ಜಿಲ್ಲಾ 15ನೆಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಮ್ಮೇಳನದ ಸರ್ವಾಧ್ಯಕ್ಷರಾದ ಪ್ರೊ. ಎ. ವಿ ನಾವುಡ ಅವರನ್ನು ಜಿಲ್ಲಾಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ಅವರು ಮಂಗಳೂರಿನ ಅವರ ಸ್ವಗೃಹದಲ್ಲಿ ವಿದ್ಯುಕ್ತವಾಗಿ ಆಹ್ವಾನಿಸಿದರು.
ಈ ಸಂದರ್ಭದಲ್ಲಿ ಪ್ರೊ. ನಾವಡ ಅವರ ಪತ್ನಿ ಹಿರಿಯ ಲೇಖಕಿ ಡಾ| ಗಾಯತ್ರಿ ನಾವಡ, ಗೌರವ ಕಾರ್ಯದರ್ಶಿಗಳಾದ ಸುಬ್ರಮಣ್ಯ ಶೆಟ್ಟಿ, ಕೋಶಾಧ್ಯಕ್ಷರಾದ ಮನೋಹರ ಪಿ, ಉಡುಪಿ ತಾಲೂಕು ಅಧ್ಯಕ್ಷರಾದ ರವಿರಾಜ್ ಎಚ್.ಪಿ, ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.