



ಕಾರ್ಕಳ; ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ(ರಿ). ಕಾರ್ಕಳ ತಾಲೂಕು ಘಟಕದ ವತಿಯಿಂದ ಯುಪಿಎಸ್ಸಿ ಪರೀಕ್ಷೆಯಲ್ಲಿ 545 ನೇ ರ್ಯಾಂಕ್ ಗಳಿಸಿದ ಕಾರ್ಕಳ ಜರಿಗುಡ್ಡೆ ನಿವಾಸಿ ಮೊಹಮದ್ ಶೌಕತ್ ಅಝೀಮ್ ರವರನ್ನು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ(ರಿ). ಕಾರ್ಕಳ ತಾಲೂಕು ಘಟಕದ ಅಧ್ಯಕ್ಷ ಮೊಹಮ್ಮದ್ ಶರೀಫ್ ರವರು ಒಕ್ಕೂಟದ ಪರವಾಗಿ ಸನ್ಮಾನಿಸಿದರು ಈ ಸಂಧರ್ಭದಲ್ಲಿ ಜಮೀಯ್ಯತುಲ್ ಪಲಾಹ್ ಉಡುಪಿ ದ.ಕ ಜಿಲ್ಲಾ ಅಧ್ಯಕ್ಷ ಸಬೀಹ್ ಅಹ್ಮದ್ ಖಾಝಿ , ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ(ರಿ) ಉಪಾಧ್ಯಕ್ಷ ಮೊಹಮ್ಮದ್ ಗೌಸ್ ಮಿಯ್ಯಾರು , ಮಾಜಿ ಅಧ್ಯಕ್ಷ, ಕಾರ್ಕಳ ಮುಸ್ಲಿಂ ಜಮಾತ್ ಅಧ್ಯಕ್ಷ ಅಶ್ಪಾಕ್ ಅಹ್ಮದ್, ಕರ್ನಾಟಕ ಮುಸ್ಲಿಂ ಜಮಾತ್ ಕಾರ್ಕಳ ತಾಲೂಕು ಅಧ್ಯಕ್ಷ ನಾಸೀರ್ ಶೇಖ್ ಬೈಲೂರು, ಜಮೀಯ್ಯತುಲ್ ಪಲಾಹ್ ಕಾರ್ಕಳ ತಾಲೂಕು ಅಧ್ಯಕ್ಷ ಮೊಹಮ್ಮದ್ ಯಾಕುಬ್, ಕಾರ್ಯದರ್ಶಿ ಸಯ್ಯದ್ ಹಸನ್, ಕೋಶಾಧಿಕಾರಿ ಸಮದ್ ಖಾನ್ ,ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ(ರಿ). ಕಾರ್ಕಳ ತಾಲೂಕು ಘಟಕದ ಕಾರ್ಯದರ್ಶಿ ಅಬ್ದುಲ್ ರಶೀದ್ , ಬಂಗ್ಲೆಗುಡ್ಡೆ, ಕಾರ್ಕಳ ತಾಲೂಕು ಸುನ್ನಿ ಮದ್ರಸ ಮ್ಯಾನೇಜ್ಮೆಂಟ್ ಸಮಿತಿ ಅಧ್ಯಕ್ಷ ಎಚ್ ಸುಲೇಮಾನ್ ಬಜಗೋಳಿ ಯವರು ಉಪಸ್ಥಿತರಿದ್ದರು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.