



ಉಡುಪಿ: ಉಡುಪಿ ಅಲೆವೂರು ಗ್ರಾಮದ ಮಂಚಿಕೆರೆಯ ದೈವಾರಾಧಕ ಸಾಧು ಪಾಣಾರ ಅವರು ದಿ| ದೋಗು ದಿ| ಕರ್ಗಿ ದಂಪತಿಯ ಪುತ್ರ ದೈವ ನರ್ತಕ ಸಾಧು ಪಾಣಾರ ನಿಧನರಾಗಿದ್ದಾರೆ.
ಅವರು 45 ವರ್ಷಗಳಿಂದ ದೈವಾರಾಧನೆಯಲ್ಲಿ ತೊಡಗಿಸಿಕೊಂಡಿದ್ದ ಇವರಿಗೆ ಈ ಕಲೆಯು ಅವರಿಗೆ ವಂಶಪಾರಂಪರ್ಯವಾಗಿ ಸಿದ್ಧಿಸಿದೆ. ನರ್ತನ, ನುಡಿಗಟ್ಟು, ಪಾಡ್ದನ ಕಲೆಗಳನ್ನು ಸೊಗಸಾಗಿ ನೆರವೇರಿಸಿಕೊಂಡು ಬಂದಿದ್ದಾರೆ.
ರಾಜ್ಯ ಜಾನಪದ ಅಕಾಡೆಮಿಯ ಪ್ರಶಸ್ತಿಗೆ ಆಯ್ಕೆಯಾಗಿರುವ ಅವರು ಉಡುಪಿ ಜಿಲ್ಲೆ ಹಾಗೂ ಹೊರ ಊರುಗಳಲ್ಲಿ ಅವರು ದೈವಾರಾಧನೆ ನಡೆಸಿದ್ದಾರೆ. ಮುಖ್ಯವಾಗಿ ಜುಮಾದಿ, ವ್ಯಾಘ್ರ ಚಾಮುಂಡಿ, ಕಲ್ಲುಕುಟ್ಟಿಗ, ಪಂಜುರ್ಲಿ, ಬಗ್ಗು ಪಂಜುರ್ಲಿ, ಬೊಬ್ಬರ್ಯ, ಮಲೆಧೂಮಾವತಿ ದೈವಗಳ ಸೇವೆ ಸಲ್ಲಿಸಿದ್ದಾರೆ. ಅವರ ಕಲಾ ಸೇವೆಯನ್ನು ಗುರುತಿಸಿ ಈಗಾಗಲೇ ಹಲವು ಸಂಘ-ಸಂಸ್ಥೆಗಳು ಗೌರವಿಸಿವೆ. ಪತ್ನಿ ವಸಂತಿ ಪಾಣಾರ, ಪುತ್ರ, ಇಬ್ಬರು ಪುತ್ರಿಯರ ಸಂಸಾರ ಅವರದು. ಪುತ್ರ ದಿನೇಶ್ ಪಾಣಾರ ತಂದೆಯ ವೃತ್ತಿಯನ್ನೇ ನಡೆಸುತ್ತಿದ್ದಾರೆ.
ಸಂತಾಪ: ಉಡುಪಿ ಜಿಲ್ಲೆಯ ಹಾಗೂ ಹೊರ ಊರುಗಳಲ್ಲಿ ಇವರು ದೈವಾರಾಧನೆ ನಡೆಸಿದ್ದಾರೆ. ಮುಖ್ಯವಾಗಿ ಜುಮಾದಿ, ವ್ಯಾಘ್ರ ಚಾಮುಂಡಿ, ಕಲ್ಲುಕುಟ್ಟಿಗ, ಪಂಜುರ್ಲಿ, ಬಗ್ಗು ಪಂಜುರ್ಲಿ, ಬೊಬ್ಬರ್ಯ, ಮಲೆಧೂಮಾವತಿ ದೈವಗಳ ಸೇವೆ ಸಲ್ಲಿಸಿರುತ್ತಾರೆ. ಇವರ ಕಲಾ ಸೇವೆಯನ್ನು ಗುರುತಿಸಿ ಈಗಾಗಲೇ ಹಲವು ಸಂಘ- ಸಂಸ್ಥೆಗಳ ಪ್ರಶಸ್ತಿಗಳು ಲಭಿಸಿದೆ. ಶ್ರೀಯುತರ ಆತ್ಮಕ್ಕೆ ಶಾಂತಿ ಸಿಗಲೆಂದು ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉಡುಪಿ ಹಾಗೂ ಕರ್ನಾಟಕ ಜಾನಪದ ಅಕಾಡೆಮಿ ನಿಕಟ ಪೂರ್ವ ಅಧ್ಯಕ್ಷರಾದ ಮಂಜಮ್ಮ ಜೋಗತಿ ರವರು ಸಂತಾಪವನ್ನು ವ್ಯಕ್ತಪಡಿಸಿರುತ್ತಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.