logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಗೊಂಬೆ ವೇಷ ಧರಿಸಿ ಅನಾರೋಗ್ಯ ಪೀಡಿತ ಯುವತಿಗೆ ನೆರವು

ಟ್ರೆಂಡಿಂಗ್
share whatsappshare facebookshare telegram
17 Sept 2026
post image

ಉಡುಪಿ: ಗೊಂಬೆ ವೇಷ ಧರಿಸಿ ಅನಾರೋಗ್ಯ ಪೀಡಿತ ಯುವತಿಗೆ ನೆರವು

ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ದೆಂದೂರು ಕಟ್ಟೆ ಟೀಂ ಯುವ ವೈಭವ ತಂಡದ ಸದಸ್ಯರು ಗೊಂಬೆ ವೇಷ ಧರಿಸಿ ಸಂಗ್ರಹಿಸಿದ ಹಣವನ್ನು ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿರುವ ಸಮೀಕ್ಷಾ ಅವರ ಚಿಕಿತ್ಸೆಗೆ ನೆರವಾಗುವ ನಿಟ್ಟಿನಲ್ಲಿ ಕುಟುಂಬಕ್ಕೆ ಹಸ್ತಾಂತರಿಸಿದರು.

ಉಡುಪಿ ಮಣಿಪುರದ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ, ಕೆಲ್ಮಂಜೆ ಇಲ್ಲಿ ಸಹಾಯಧನ ಹಸ್ತಾಂತರಿಸಲಾಯಿತು. ಉಡುಪಿ ಶ್ರೀಕೃಷ್ಣ ಮಠದ ವಿಟ್ಲಪಿಂಡಿ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂದರ್ಭಗಳಲ್ಲಿ ತಂಡವು ಗೊಂಬೆ ವೇಷ ಧರಿಸಿ ಸಂಗ್ರಹಿಸಿದ ದೇಣಿಗೆಯನ್ನು ಸೇವಾ ಕಾರ್ಯಕ್ಕೆ ಬಳಸಲಾಗಿದೆ.

ಟೀಂ ಯುವ ವೈಭವ ತಂಡವು ಸತತ ಎರಡನೇ ವರ್ಷವೂ ಅನಾರೋಗ್ಯ ಪೀಡಿತ ರಿಗೆ ಸಹಾಯ ಹಸ್ತ ಚಾಚುತ್ತಿದೆ... ಈ ಸಂದರ್ಭದಲ್ಲಿ ಸತೀಶ್ ಸನಿಲ್, ಸಂತೋಷ್ ಶೆಟ್ಟಿ, ಸತೀಶ್ ಪೂಜಾರಿ ಸೇರಿದಂತೆ ತಂಡದ ಸದಸ್ಯರು ಉಪಸ್ಥಿತರಿದ್ದರು.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.