



ಉಡುಪಿ, : ಜಿಲ್ಲೆಯಲ್ಲಿ ಈವರೆಗೆ ಇ-ಕೆವೈಸಿ ಆಗದೇ ಇರುವ ಪಡಿತರ ಚೀಟಿಯ ಸದಸ್ಯರು ಮೇ 20 ರ ಒಳಗೆ ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ, ಬೆರಳಚ್ಚು ನೊಂದಾಯಿಸಿಕೊಳ್ಳಲು (ಆಧಾರ ದೃಢೀಕರಣ ಇ-ಕೆವೈಸಿ) ಅಂತಿಮ ಅವಕಾಶ ಕಲ್ಪಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಪಡಿತರ ಚೀಟಿದಾರರು ಜಾತಿ ಪ್ರಮಾಣ ಪತ್ರ ಹಾಗೂ ಅನಿಲ ಸಂಪರ್ಕ ಹೊಂದಿರುವ ಪಡಿತರ ಚೀಟಿದಾರರು, ಅನಿಲ ಸಂಪರ್ಕದ ಮಾಹಿತಿ ಮತ್ತು ಮೊಬೈಲ್ ಸಂಖ್ಯೆಯನ್ನು ಇ-ಕೆವೈಸಿ ಮಾಡುವ ನ್ಯಾಯಬೆಲೆ ಅಂಗಡಿಗಳಿಗೆ ನೀಡಬೇಕು. ಸರಕಾರದ ಆದೇಶದಂತೆ ಮೇ 20 ರ ಒಳಗೆ ಇ-ಕೆವೈಸಿ ಮಾಡಿಸದೇ ಇರುವ ಪಡಿತರ ಚೀಟಿಯ ಸದಸ್ಯರ ಹೆಸರನ್ನು ರದ್ದು ಪಡಿಸಲು ಕ್ರಮವಹಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.