logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಉಡುಪಿ,: ಪಡಿತರ ಚೀಟಿಗೆ ಇ-ಕೆವೈಸಿ: ನಿಯಮ ಸಡಿಲಿಕೆ

ಟ್ರೆಂಡಿಂಗ್
share whatsappshare facebookshare telegram
9 Jun 2022
post image

ಉಡುಪಿ,:ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿದಾರರಿಗೆ ಪೋರ್ಟಿಬಿಲಿಟಿ ಮೂಲಕ ಜೂನ್ 30 ರ ಒಳಗೆ ಇ-ಕೆವೈಸಿ ಮಾಡಿಸಲು ಅಂತಿಮ ಅವಕಾಶ ಕಲ್ಪಿಸಲಾಗಿದೆ. ಕುಟುಂಬದ ಎಲ್ಲಾ ಸದಸ್ಯರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಈವರೆಗೆ ಪಡಿತರ ಆಹಾರಧಾನ್ಯ ಪಡೆಯುತ್ತಿದ್ದ ಮೂಲ ನ್ಯಾಯಬೆಲೆ ಅಂಗಡಿಗಳಲ್ಲಿ ಮಾತ್ರ ಇ-ಕೆವೈಸಿ ಮಾಡಲು ಇದ್ದ ನಿಯಮವನ್ನು ಸಡಿಲಗೊಳಿಸಲಾಗಿದ್ದು, ಇದುವರೆಗೂ ಇ- ಕೆವೈಸಿ ಆಗದೇ ಇರುವ ಪಡಿತರ ಚೀಟಿಯ ಸದಸ್ಯರು ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ತಮ್ಮ ಬೆರಳಚ್ಚು ನೊಂದಾಯಿಸಿಕೊಳ್ಳಬಹುದಾಗಿದೆ (ಆಧಾರ ದೃಢೀಕರಣ ಇ-ಕೆವೈಸಿ). ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಪಡಿತರ ಚೀಟಿದಾರರು ಜಾತಿ ಪ್ರಮಾಣ ಪತ್ರ ಹಾಗೂ ಅನಿಲ ಸಂಪರ್ಕ ಹೊಂದಿರುವ ಪಡಿತರ ಚೀಟಿದಾರರು, ಅನಿಲ ಸಂಪರ್ಕದ ಮಾಹಿತಿ ಮತ್ತು ಮೊಬೈಲ್ ಸಂಖ್ಯೆಯನ್ನು ಇ-ಕೆವೈಸಿ ಮಾಡುವ ನ್ಯಾಯಬೆಲೆ ಅಂಗಡಿಗಳಿಗೆ ನೀಡಬೇಕು. ಸರಕಾರದ ಆದೇಶದಂತೆ ಜೂನ್ 30 ರ ಒಳಗೆ ಇ-ಕೆವೈಸಿ ಮಾಡಿಸದೇ ಇರುವ ಪಡಿತರ ಚೀಟಿ ಮತ್ತು ಸದಸ್ಯರನ್ನು ರದ್ದು ಪಡಿಸಲು ಕ್ರಮವಹಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.