



ಉಡುಪಿ, : ವಿವಿಧ ಕಾರಣಗಳಿಂದ ತೆರವಾಗಿರುವ ಉಡುಪಿಯ ಅಲೆವೂರು ಗ್ರಾಮ ಪಂಚಾಯತ್ ನ 1 ಸ್ಥಾನಕ್ಕೆ ರಾಜ್ಯ ಚುನಾವಣಾ ಆಯೋಗವು ಚುನಾವಣೆ ವೇಳಾಪಟ್ಟಿಯನ್ನು ಘೋಷಿಸಿದ್ದು, ಮೇ 5 ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದು, ನಾಮಪತ್ರಗಳನ್ನು ಸಲ್ಲಿಸಲು ಮೇ 10 ಕೊನೆಯ ದಿನವಾಗಿದ್ದು, ಮೇ 11 ರಂದು ನಾಮಪತ್ರಗಳ ಪರಿಶೀಲನೆ, ಮೇ 13 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು, ಮೇ 20 ರಂದು ಬೆಳಗ್ಗೆ 7 ರಿಂದ ಸಂಜೆ 5 ರವರೆಗೆ ಚುನಾವಣೆ ನಡೆಯಲಿದೆ. ಮೇ 22 ರಂದು ಮತ ಎಣಿಕೆ ನಡೆಯಲಿದೆ. ಚುನಾವಣೆ ನಡೆಯುವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮೇ 5 ರಿಂದ 22 ರವರೆಗೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ರಾಜ್ಯ ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.