



ಉಡುಪಿ: ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಹಾಗೂ ನೌಕರರ ಭವಿಷ್ಯ ನಿಧಿ ಸಂಘಟನೆ ಪ್ರಾದೇಶಿಕ ಕಚೇರಿ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಇ.ಪಿ.ಎಫ್‌ನ 71 ನೇ ಸಂಸ್ಥಾಪನಾ ದಿನಾಚರಣೆಯು ನವೆಂಬರ್ 1 ರಂದು ಸಂಜೆ 4 ಗಂಟೆಗೆ ನಗರದ ಕಿದಿಯೂರು ಹೋಟೆಲ್‌ನ ಮಾಧವ ಕೃಷ್ಣ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಶಾಸಕರುಗಳಾದ ವಿ ಸುನಿಲ್ ಕುಮಾರ್, ಯಶ್‌ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಗುರುರಾಜ್ ಗಂಟಿಹೊಳೆ, ಪ್ರಾದೇಶಿಕ ಸಮಿತಿಯ ಸದಸ್ಯ ನಾಗನಾಥ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.