logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಎಕ್ಸಿಕ್ಯೂಟಿವ್ ಕಾನ್‌ಸ್ಟೇಬಲ್ ಹುದ್ದೆ: ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
16 Sept 2023
post image

ಉಡುಪಿ: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರವು ದೆಹಲಿ ಪೋಲೀಸ್ ಪಡೆಗಳಲ್ಲಿ ಎಕ್ಸಿಕ್ಯೂಟಿವ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು 2023 ರ ಜುಲೈ 1 ಕ್ಕೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 21 ರಿಂದ 25 ವರ್ಷ ವಯೋಮಿತಿ ಹೊಂದಿರುವ (ಇತರೆ ವರ್ಗಗಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ), ಮಾನ್ಯತೆ ಪಡೆದ ಮಂಡಳಿಯಿಂದ 10+2 ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಹಾಗೂ ಎಲ್.ಎಂ.ವಿ ವಾಹನಗಳ ಚಾಲನಾ ಪರವಾನಗಿ ಹೊಂದಿರುವ ಅಭ್ಯರ್ಥಿಗಳು ವೆಬ್‌ಸೈಟ್ www.ssckkr.kar.nic.in ಮತ್ತು https://ssc.nic.in ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್ ಮೂಲಕ ನೊಂದಣಿಗೆ ಸೆಪ್ಟಂಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-25502520 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.