



ಉಡುಪಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಉದ್ಯಮಶೀಲರು ಸ್ಥಾಪಿಸುವ ಸೂಕ್ಷö್ಮ ಮತ್ತು ಸಣ್ಣ ಕೈಗಾರಿಕಾ ಘಟಕಗಳಿಗೆ ಹಾಗೂ ಈಗಾಗಲೇ ಅಸ್ತಿತ್ವದಲ್ಲಿರುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಘಟಕಗಳ ವಿಸ್ತರಣೆ, ಆಧುನೀಕರಣ, ವೈವಿಧ್ಯೀಕರಣ ಹಾಗೂ ತಾಂತ್ರಿಕ ಉನ್ನತೀಕರಣ ಚಟುವಟಿಕೆಗಳಲ್ಲಿ ಹೂಡಿಕೆಗಾಗಿ ಸಾಲ ಪಡೆಯುವ ಘಟಕಗಳಿಗೆ ರಾಜ್ಯ ಹಣಕಾಸು ಸಂಸ್ಥೆ ಮೂಲಕ ಪಡೆಯುವ ಕನಿಷ್ಟ ರೂ. 5 ಲಕ್ಷ ದಿಂದ ಗರಿಷ್ಟ ರೂ.10 ಕೋಟಿವರೆಗಿನ ಸಾಲಕ್ಕೆ ಶೇ. 6 ರಷ್ಟು ಬಡ್ಡಿ ಸಹಾಯಧನವನ್ನು ನೀಡಲು ಸರ್ಕಾರ ಮಂಜೂರಾತಿಯನ್ನು ನೀಡಿದ್ದು, ಈ ಯೋಜನೆಯ ಸದುಪಯೋಗವನ್ನು ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಉದ್ಯಮಿಗಳು ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ), ಮೌಲಾನಾ ಆಝಾದ್ ಭವನ, ಒಂದನೇ ಮಹಡಿ, ಪಶು ಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ಉಡುಪಿ ದೂರವಾಣಿ ಸಂಖ್ಯೆ: 0820- 2574990, ಸಹಾಯವಾಣಿ ಸಂಖ್ಯೆ 8277799990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕುಂದಾಪುರ ದೂ.ಸಂಖ್ಯೆ: 08254-230370 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101 ತಾಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.