logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಅಲ್ಪಸಂಖ್ಯಾತರ ವರ್ಗಗಳಿಗೆ ಸೇರಿದ ಶಿಷ್ಯವೇತನ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 16 ರ ವರೆಗೆ ವಿಸ್ತರಣೆ

ಟ್ರೆಂಡಿಂಗ್
share whatsappshare facebookshare telegram
29 Nov 2023
post image

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ವರ್ಗಗಳಿಗೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧರು ಮತ್ತು ಸಿಖ್ಖ್ ಸಮುದಾಯದ ಕಾನೂನು ಪದವೀಧರರಿಂದ ವಕೀಲಿ ವೃತ್ತಿಯಲ್ಲಿ ತರಬೇತಿ ನೀಡಿ ಶಿಷ್ಯವೇತನ ಮಂಜೂರು ಮಾಡುವ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 16 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಚೇರಿ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ; 0820-2574596 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.