logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಜಿಲ್ಲೆಯಲ್ಲಿ ಸುಲಿಗೆ, ಮನೆ, ವಾಹನ ಕಳ್ಳತನ ಪ್ರಕರಣ: ಮೂವರು ಆರೋಪಿಗಳ ಸೆರೆ, ಲಕ್ಷಾಂತರ ರೂ. ಮೌಲ್ಯದ ಸೊತ್ತು ವಶ

ಟ್ರೆಂಡಿಂಗ್
share whatsappshare facebookshare telegram
7 Aug 2022
post image

ಕಾಪು:: ಸುಲಿಗೆ, ಮನೆ ಕಳವು ಹಾಗೂ ವಾಹನ ಕಳವು ಪ್ರಕರಣಗಳಿಗೆ ಸಂಬಂಧಿಸಿದಂತೆ ಮೂರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಬಜ್ಪೆ ಕುರ್ಸುಗುಡ್ಡೆ ನಿವಾಸಿ ಮಹಮ್ಮದ್ ಆರೀಫ್ ಅಲಿಯಾಸ್ ಮುನ್ನ (37), ಮಹಮ್ಮದ್ ಮುನೀರ್ (24) ಮತ್ತು ಅಕ್ಬರ್ (36) ಎಂದು ಗುರುತಿಸಲಾಗಿದೆ. ವೃದ್ದೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಸುಲಿಗೆ, ಉಚ್ಚಿಲ ಪಣಿಯೂರು ಹೋಗುವ ದಾರಿಯಲ್ಲಿರುವ ಮನೆಯೊಂದರಿಂದ ರೂಪಾಯಿ 2,52,000/- ಹಣ ಕಳವು, ಪಡುಬಿದ್ರಿ, ಉಚ್ಚಿಲ, ಕಟಪಾಡಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು ಪ್ರಕರಣಗಳಿಗೆ ಸಂಬಂಧಿಸಿದಂತೆ ಪಡುಬಿದ್ರಿ ಮತ್ತು ಕಾಪು ಠಾಣೆಗಳಲ್ಲಿ ಕಳವು ಪ್ರಕರಣ ದಾಖಲಾಗಿದ್ದವು. ಕಾಪು ವೃತ್ತ ನಿರೀಕ್ಷಕರ ನೇತೃತ್ವದಲ್ಲಿ‌ ಯಶಸ್ವೀ ಕಾರ್ಯಾಚರಣೆ ನಡೆಸಿದ ಪೊಲೀಸರ ತಂಡ ಆರೋಪಿಗಳಾದ ಮಹಮ್ಮದ್ ಆರೀಫ್‌ ಅಲಿಯಾಸ್ ಮುನ್ನ, ಮಹಮ್ಮದ್ ಮುನೀರ್ ಮತ್ತು ಅಕ್ಬರ್‌ ಎಂಬವರನ್ನು ಬಂಧಿಸಿ, 2 ½ ಪವನ್ ತೂಕದ ಚಿನ್ನದ ಸರ, ಮೊಬೈಲ್ ಪೋನ್-1, ನಗದು ರೂಪಾಯಿ 61,000/-, ಕಳವು ಮಾಡಿದ 3 ದ್ವಿಚಕ್ರ ವಾಹನ ಹಾಗೂ ಕೃತ್ಯಕ್ಕೆ ಬಳಸಿದ ಆಟೋ ರಿಕ್ಷಾ-1, ಮೋಟಾರು ಸೈಕಲ್ -1 ಹಾಗೂ ಇತರ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಎಲ್ಲಾ ಸೊತ್ತುಗಳ ಒಟ್ಟು ಮೌಲ್ಯ ರೂಪಾಯಿ 2,99 ಲಕ್ಷ ಆಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.