logo
WhatsApp Image 2026-10-07 at 11.10.42 PM - Copy.jpeg
WhatsApp Image 2026-04-02 at 14.46.04.jpeg

ಉಡುಪಿ: ಗುಂಡಿಬೈಲ್ ಪೆಟ್ರೋಲ್ ಬಂಕ್ ಮಾಲಕರ ಸಂಬಂಧಿ ಮೇಲೆ ಮಾರಣಾಂತಿಕ ಹಲ್ಲೆ

ಟ್ರೆಂಡಿಂಗ್
share whatsappshare facebookshare telegram
9 Nov 2026
post image

ಉಡುಪಿ: ನಗರದ ಗುಂಡಿಬೈಲ್‌ನ ಪೆಟ್ರೋಲ್ ಬಂಕ್ ಆವರಣದಲ್ಲಿ ಮದ್ಯಪಾನ ಮಾಡುತ್ತಿದ್ದುದನ್ನು ಪ್ರಶ್ನಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಬಂಕ್ ಮಾಲಕರ ಸಂಬಂಧಿಯೊಬ್ಬರ ಮೇಲೆ ಐವರ ತಂಡ ಹಲ್ಲೆ ನಡೆಸಿರುವ ಘಟನೆ ನ.7ರ ರಾತ್ರಿ ನಡೆದಿದೆ.

ನಿಟ್ಟೂರು ನಿವಾಸಿ ಆಶಿಶ್ ಶೆಟ್ಟಿ (44) ಹಲ್ಲೆಗೊಳಗಾದವರು.

ಶನಿವಾರ ರಾತ್ರಿ ಸುಮಾರು 10 ಗಂಟೆಗೆ ಖಾಸಗಿ ಬಸ್ ಚಾಲಕ ಆಕಾಶ್ ಎಂಬಾತ ಪೆಟ್ರೋಲ್ ಬಂಕ್ ಆವರಣದಲ್ಲಿ ಬಸ್ ನಿಲ್ಲಿಸಿ ಮದ್ಯಪಾನ ಮಾಡುತ್ತಿದ್ದ. ಇದನ್ನು ಗಮನಿಸಿದ ಆಶಿಶ್ ಶೆಟ್ಟಿ, ಬಂಕ್ ಆವರಣದಲ್ಲಿ ಮದ್ಯಪಾನ ಮಾಡದಂತೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಬಳಿಕ ಪರಸ್ಪರ ತಳ್ಳಾಟವೂ ನಡೆದಿದೆ.

ಕೆಲವು ಸಮಯದ ಬಳಿಕ ನಾಲ್ವರು ಕಾರಿನಲ್ಲಿ ಹಾಗೂ ಮತ್ತೋರ್ವ ಲಾರಿಯಲ್ಲಿ ಪೆಟ್ರೋಲ್ ಬಂಕ್‌ಗೆ ಮರಳಿದ್ದಾರೆ. ಲಾರಿಗೆ ಸುಮಾರು 3 ಸಾವಿರ ರೂ. ಮೌಲ್ಯದ ಡೀಸೆಲ್ ತುಂಬಿಸಿಕೊಂಡ ಬಳಿಕ ಆರೋಪಿಗಳು ಏಕಾಏಕಿ ಆಶಿಶ್ ಶೆಟ್ಟಿ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಆರೋಪಿಗಳು ಕೈಗಳಿಂದ ಹಲ್ಲೆ ನಡೆಸಿ, ಕಾಲಿನಿಂದ ತುಳಿದಿದ್ದಾರೆ. ಈ ವೇಳೆ ಪುನೀತ್ ಎಂಬಾತ ತನ್ನ ಕೈಯಲ್ಲಿದ್ದ ಕಡಗದಿಂದ ಆಶಿಶ್ ಅವರ ತಲೆಗೆ ಬಲವಾಗಿ ಹೊಡೆದಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಹಲ್ಲೆಯಿಂದ ಗಾಯಗೊಂಡ ಆಶಿಶ್ ಶೆಟ್ಟಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

ಪುನೀತ್ ಫಲಿಮಾರ್ ಹಾಗೂ ಆತನ ಸಹಚರರ ತಂಡವು ಕೆಲವು ತಿಂಗಳ ಹಿಂದೆ ಮಲ್ಪೆ ಬೀಚ್‌ನಲ್ಲಿ ಹಿಂದೂ ಸಂಘಟನೆಯ ಮುಖಂಡನೊಬ್ಬನಿಗೆ ಚೂರಿಯಿಂದ ಇರಿದ ಪ್ರಕರಣದಲ್ಲೂ ಭಾಗಿಯಾಗಿತ್ತು ಎಂದು ತಿಳಿದುಬಂದಿದೆ. ಇದೀಗ ಗುಂಡಿಬೈಲ್ ಪೆಟ್ರೋಲ್ ಬಂಕ್‌ನಲ್ಲಿ ನಡೆದ ಹಲ್ಲೆ ಪ್ರಕರಣದಲ್ಲೂ ಇದೇ ತಂಡದ ಹೆಸರು ಕೇಳಿಬಂದಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

WhatsApp Image 2026-10-20 at 7.47.33 PM.jpeg
WhatsApp Image 2026-10-20 at 7.47.33 PM (1) - Copy.jpeg
WhatsApp Image 2026-10-20 at 6.05.03 PM.jpeg
WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.