



ಉಡುಪಿ : ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯ ಸರ್ಕಾರದ ಶುಲ್ಕ ಮರುಪಾವತಿ ಯೋಜನೆಯಡಿ ಎಸ್.ಎಸ್.ಎಲ್.ಸಿ ನಂತರದ (ಪೋಸ್ಟ್ ಮೆಟ್ರಿಕ್) ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2574810, 2574811 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.