logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಮಾಜಿ ಸೈನಿಕರಿಗೆ ಪರೀಕ್ಷೆ: ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
25 Mar 2022
post image

ಉಡುಪಿ,: ಆಂಧ್ರ ವಿಶ್ವವಿದ್ಯಾಲಯವು ಕೇಂದ್ರ ಸೈನಿಕ ಮಂಡಳಿಯ ಎಂ.ಓ.ಯು ದೊಂದಿಗೆ ಮಾಜಿ ಸೈನಿಕರಿಗೆ ನೀಡಲಾಗುವ ಬಿ.ಎ (ಹೆಚ್.ಆರ್.ಎಂ) ಪ್ರಮಾಣ ಪತ್ರಕ್ಕಾಗಿ ಬೆಂಗಳೂರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ನಿರ್ದೇಶನಾಲಯದ ವತಿಯಿಂದ ಮೇ 4 ನೇ ವಾರ ಹಾಗೂ ನವೆಂಬರ್ 4 ನೇ ವಾರದಲ್ಲಿ ಪರೀಕ್ಷೆಯನ್ನು ನಡೆಸಲಾಗುವುದು. ಮಾಜಿ ಸೈನಿಕರು ಅರ್ಜಿ ನಮೂನೆಯನ್ನು ಏ.1 ರಿಂದ 25 ರ ವರೆಗೆ ಹಾಗೂ ಅಕ್ಟೋಬರ್ 1 ರಿಂದ 25 ರ ವರೆಗೆ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಏ.30 ಹಾಗೂ ಅ. 30 ರ ಒಳಗೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.