



ಉಡುಪಿ: ಉಡುಪಿಯ ಎಂಜಿಎಂ ಕಾಲೇಜಿನ ಕನ್ನಡ ವಿಭಾಗ ಹಾಗೂ ಸಾಹಿತ್ಯ ಸಂಘ ಮತ್ತು ಐಕ್ಯೂಎಸಿ ಇವರ ಸಹಭಾಗಿತ್ವದಲ್ಲಿ ಗಮಕ ಗಾಯನ ವ್ಯಾಖ್ಯಾನದ ( ಕುಮಾರವ್ಯಾಸನ ಭಾರತದ ಕರ್ಣಬೇದನೆ ) ಕುರಿತಾದ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಭಂಡಾಕರ್ಸ್ ಕಾಲೇಜಿನ ದ್ವಿತೀಯ ಬಿ.ಎಸ್ಸಿ ವಿದ್ಯಾರ್ಥಿನಿ ಕಾವ್ಯ ಗಮಕ ಗಾಯನ ಮಾಡಿದರು. ಸರಸ್ವತಿ ವಿದ್ಯಾಲಯ ಗಂಗೊಳ್ಳಿಯ ಉಪನ್ಯಾಸಕರ ಸುಜಿಂದ್ರ ಹಂದೆ ಗಮಕ ವ್ಯಾಖ್ಯಾನ ಮಾಡಿದರು
ಕಾರ್ಯಕ್ರಮದಲ್ಲಿ ಎಂಜಿಎಂ ಕಾಲೇಜಿನ ಪ್ರಾಂಶುಪಾಲರಾದ ಬಾ. ದೇವಿದಾಸ್ ಎಸ್ ನಾಯ್ಕ, ಕನ್ನಡ ವಿಭಾಗದ ಮುಖ್ಯಸ್ಥ ಡಾ. ಪುತ್ತಿ ವಸಂತ್ ಕುಮಾರ್, ಕಾಲೇಜಿನ ವಿವಿಧ ವಿಭಾಗದ ಉಪನ್ಯಾಸಕರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.