logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಕಾಂಜರಕಟ್ಟೆಯಲ್ಲಿ ಹೋಟೆಲ್‌ಗೆ ಬೆಂಕಿ: ₹10 ಲಕ್ಷಕ್ಕೂ ಅಧಿಕ ನಷ್ಟ

ಟ್ರೆಂಡಿಂಗ್
share whatsappshare facebookshare telegram
10 Oct 2026
post image

ಉಡುಪಿ: ಮೂಡುಬಿದಿರೆ–ಕಾರ್ಕಳ ರಸ್ತೆಯ ಕಾಂಜರಕಟ್ಟೆಯಲ್ಲಿರುವ ಶ್ರೀ ಕೃಷ್ಣ ಹೋಟೆಲ್‌ನಲ್ಲಿ ಗುರುವಾರ ರಾತ್ರಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಹೋಟೆಲ್ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಘಟನೆಯಿಂದ ₹10 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ರಾಮದಾಸ್ ಸಹೋದರರು ನಡೆಸುತ್ತಿದ್ದ ಶ್ರೀ ಕೃಷ್ಣ ಹೋಟೆಲ್‌ನಲ್ಲಿ ಈ ಘಟನೆ ನಡೆದಿದೆ. ಗುರುವಾರ ರಾತ್ರಿ ಸುಮಾರು 8 ಗಂಟೆಗೆ ಹೋಟೆಲ್ ಬಂದ್ ಮಾಡಿ ಮಾಲೀಕರು ಮನೆಗೆ ತೆರಳಿದ್ದರು. ಸ್ವಲ್ಪ ಸಮಯದ ಬಳಿಕ ಹೋಟೆಲ್ ಆವರಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಇಡೀ ಹೋಟೆಲ್‌ಗೆ ವ್ಯಾಪಿಸಿದೆ.

ಬೆಂಕಿ ಕಾಣಿಸಿಕೊಂಡಿರುವುದನ್ನು ಗಮನಿಸಿದ ಸ್ಥಳೀಯ ನಿವಾಸಿ ರವೀಂದ್ರ ಸಾಲಿಯನ್ ಹಾಗೂ ಇತರರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದರು. ಬಳಿಕ ಅದಾನಿ ಅಗ್ನಿಶಾಮಕ ದಳ ಮತ್ತು ಕಾರ್ಕಳ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಹಲವು ಸ್ಥಳೀಯರು ಅಗ್ನಿಶಾಮಕ ಕಾರ್ಯಾಚರಣೆಯಲ್ಲಿ ಕೈಜೋಡಿಸಿದರು.

ಆದರೆ, ಬೆಂಕಿಯ ತೀವ್ರತೆಗೆ ಹೋಟೆಲ್ ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಒಳಗಿದ್ದ ವಿವಿಧ ಉಪಕರಣಗಳು ಹಾಗೂ ಸಾಮಗ್ರಿಗಳು ನಾಶವಾಗಿವೆ. ಘಟನೆಯಿಂದ ₹10 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.