logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ರಾಜ್ಯಮಟ್ಟದ ಕ್ರೀಡಾಕೂಟ ಉದ್ಘಾಟನೆ

ಟ್ರೆಂಡಿಂಗ್
share whatsappshare facebookshare telegram
31 Oct 2023
post image

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಸೈಂಟ್ ಸಿಸಿಲೀಸ್ ಪ್ರೌಢಶಾಲೆ ಉಡುಪಿ ಇವರ ಜಂಟಿ ಆಶ್ರಯದಲ್ಲಿ 14 ರ ವಯೋಮಾನದ ಶಾಲಾ ಬಾಲಕ ಹಾಗೂ ಬಾಲಕಿಯರ ರಾಜ್ಯಮಟ್ಟದ ಕ್ರೀಡಾಕೂಟವು ನವೆಂಬರ್ 1 ರಿಂದ 3 ರ ವರೆಗೆ ನಗರದ ಅಜ್ಜರಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಅಂದು ಮಧ್ಯಾಹ್ನ 4.30 ಕ್ಕೆ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್ ಹೆಬ್ಬಾಳಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್ ಮಧು ಬಂಗಾರಪ್ಪ, ಯುವ ಜನ ಸೇವೆ, ಕ್ರೀಡೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ ನಾಗೇಂದ್ರ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರುಗಳಾದ ವಿ ಸುನಿಲ್ ಕುಮಾರ್, ಗುರುರಾಜ್ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಕೋಟ ಶ್ರೀನಿವಾಸ ಪೂಜಾರಿ, ಎಸ್.ಎಲ್.ಭೋಜೆಗೌಡ, ಡಾ.ತೇಜಸ್ವಿನಿ ಗೌಡ ಹಾಗೂ ಮಂಜುನಾಥ ಭಂಡಾರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಂ.ಟಿ ರೇಜು, ಶಾಲಾ ಶಿಕ್ಷಣ ಇಲಾಖೆಯ ಆಯುಕ್ತೆ ಬಿ.ಬಿ ಕಾವೇರಿ, ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯ ಸಹ ನಿರ್ದೇಶಕ ಎಸ್.ಎನ್. ರಮೇಶ್ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.