



ಉಡುಪಿ,: ಕರ್ನಾಟಕ ಸಾಹಿತ್ಯ ಅಕಾಡೆಮಿಯ ವತಿಯಿಂದ 2021 ನೇ ಸಾಲಿನ ಪುಸ್ತಕ ಬಹುಮಾನಕ್ಕಾಗಿ 2021 ರ ಜನವರಿ 1 ರಿಂದ ಡಿಸೆಂಬರ್ 31 ರ ಒಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಕನ್ನಡ ಪುಸ್ತಕಗಳನ್ನು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ. ಕಾವ್ಯ, ನವಕವಿಗಳ ಪ್ರಥಮ ಕವನ ಸಂಕಲನ, ಕಾವ್ಯ ಹಸ್ತಪ್ರತಿ, ಕಾದಂಬರಿ, ಸಣ್ಣಕತೆ, ನಾಟಕ, ಲಲಿತ ಪ್ರಬಂಧ, ಪ್ರವಾಸ ಸಾಹಿತ್ಯ, ಜೀವನ ಚರಿತ್ರೆ/ ಆತ್ಮಕಥೆ, ಸಾಹಿತ್ಯ ವಿಮರ್ಶೆ, ಗ್ರಂಥ ಸಂಪಾದನೆ, ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ, ಮಾನವಿಕ, ಸಂಶೋಧನೆ, ವೈಚಾರಿಕ/ ಅಂಕಣ ಬರಹ, ಅನುವಾದ (ಕನ್ನಡದಿಂದ ಅನ್ಯಭಾಷೆಗಳಿಗೆ ಅನುವಾದಗೊಂಡ ಹಾಗೂ ಇಂಗ್ಲೀಷ್ ಸೇರಿದಂತೆ ಭಾರತೀಯ ಭಾಷೆಯಿಂದ ಕನ್ನಡಕ್ಕೆ ಅನುವಾದಗೊಂಡ ಕೃತಿಗಳು), ಲೇಖಕರ ಮೊದಲ ಸ್ವತಂತ್ರ ಕೃತಿ, ಕನ್ನಡದಿಂದ ಇಂಗ್ಲೀಷಿಗೆ ಅನುವಾದ, ದಾಸ ಸಾಹಿತ್ಯ ಮತ್ತು ಸಂಕೀರ್ಣದAತಹ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಜೂನ್ 15 ರ ಒಳಗೆ ರಿಜಿಸ್ಟಾçರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ಜೆ.ಸಿ ರಸ್ತೆ, ಬೆಂಗಳೂರು ಇವರಿಗೆ ಅಂಚೆ ಅಥವಾ ಕೊರಿಯರ್ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟಾçರ್ ಅನ್ನು ಸಂಪರ್ಕಿಸುವAತೆ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.