logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಉಡುಪಿ ಕಲ್ಯಾಣಪುರ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು: ಕ್ರಿಯೇಟಿವ್‌ ಸಮಾಗಮ

ಟ್ರೆಂಡಿಂಗ್
share whatsappshare facebookshare telegram
4 Jul 2023
post image

ಉಡುಪಿ: ಕ್ರಿಯೇಟಿವ್‌ ಶಿಕ್ಷಣ ಪ್ರತಿಷ್ಠಾನ (ರಿ) ಕಾರ್ಕಳ ಇವರ ಸಹಭಾಗಿತ್ವದ ಕ್ರಿಯೇಟಿವ್‌ ಪದವಿಪೂರ್ವ ಕಾಲೇಜು ಕಲ್ಯಾಣಪುರ ಉಡುಪಿಯಲ್ಲಿ ಜೂ.30 ಶುಕ್ರವಾರದಂದು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಮತ್ತು ಶೈಕ್ಷಣಿಕ, ಸಾಂಸ್ಕೃತಿಕ ,ಕ್ರೀಡಾ ಸಂಘಟನೆಗಳ ಉದ್ಘಾಟನೆ ನಿಮಿತ್ತ "ಕ್ರಿಯೇಟಿವ್‌ ಸಮಾಗಮ" ಕಾರ್ಯಕ್ರಮ ನೆರವೇರಿತು.

ಕಾರ್ಯಕ್ರಮವನ್ನು ಸಂಸ್ಥೆಯ ಸಂಸ್ಥಾಪಕರುಗಳಲ್ಲಿ ಓರ್ವರಾದ ಶ್ರೀ ಅಶ್ವತ್ ಎಸ್‌ ಎಲ್‌ ರವರು ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತುಗಳನ್ನಾಡಿದರು. “ವಿದ್ಯಾರ್ಥಿಗಳು ತಮ್ಮ ಕನಸನ್ನು ನನಸು ಮಾಡಿಕೊಳ್ಳಲು ಪಿಯುಸಿ ಹಂತಕ್ಕೆ ಬಂದಿದ್ದು, ಬದುಕಿನ ದಿಕ್ಕನ್ನೇ ಬದಲಾಯಿಸುವ ಈ ಹಂತ ಜೀವನದ ಅಮೂಲ್ಯವಾದ ಘಟ್ಟ. ಆದುದರಿಂದ ವಿದ್ಯಾರ್ಥಿಗಳು ತಮ್ಮ ಜೀವನವನ್ನು ಸಾರ್ಥಕತೆಗೊಳಿಸುವಲ್ಲಿ ಶ್ರದ್ಧಾಪೂರ್ವಕವಾಗಿ ಸಕ್ರಿಯವಾಗಿ ಕಲಿಕೆಯಲ್ಲಿ ತೊಡಗಿಸಿಕೊಳ್ಳುವುದು ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಅನಿವಾರ್ಯ. ವಿದ್ಯಾರ್ಥಿಗಳು ತಮ್ಮ ಸರ್ವಾಂಗೀಣ ಬೆಳವಣಿಗೆಯಲ್ಲಿ ಸಿದ್ದಗೊಳಿಸುವಲ್ಲಿ ನಮ್ಮ ಕ್ರಿಯೇಟಿವ್‌ ಸಂಸ್ಥೆ ಸದಾ ತಮ್ಮ ಜೊತೆಗಿರುತ್ತದೆ ಎಂದು ಆಶಯದ ನುಡಿಗಳನ್ನಾಡಿದರು.

ಸಂಸ್ಥೆಯ ಪ್ರಾಂಶುಪಾಲರಾದ ಸ್ಟ್ಯಾನಿ ಲೋಬೊ ರವರು ಸ್ವಾಗತ ಭಾಷಣವನ್ನು ಮಾಡುತ್ತಾ “ಸಂಸ್ಥೆಯ ಏಳಿಗೆಗೆ ಸಂಸ್ಥಾಪಕರುಗಳು ಹಗಲಿರುಳು ದುಡಿದು ಕಟ್ಟಿದ್ದರ ಫಲವಾಗಿ ಇಂದು ಹೆಮ್ಮರವಾಗಿ ಬೆಳೆದಿದೆ. ಒಂದು ಸುಸಜ್ಜಿತ ಕಾಲೇಜು ನಿರ್ಮಾಣದಲ್ಲಿ ಅವರ ಕಾರ್ಯ ಶ್ಲಾಘನೀಯ” ಎಂದು ಮೆಚ್ಚುಗೆಯ ಮಾತುಗಳನ್ನಾಡುತ್ತಾ ವಿದ್ಯಾರ್ಥಿಗಳು ಕಲಿಕೆಯಲ್ಲಿ ಶೃದ್ಧೆ, ಸಂಯಮವನ್ನು ಬೆಳೆಸಿಕೊಂಡಾಗ ಭವ್ಯ ಭಾರತ ದಿವ್ಯ ಪ್ರಜೆಗಳಾಗಿ ಹೊರಹೊಮ್ಮುತ್ತಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ 2022-23 ನೇ ಶೈಕ್ಷಣಿಕ ಸಾಲಿನ ಕಲಿಕೆಯಲ್ಲಿ ಪ್ರಥಮ ,ದ್ವಿತೀಯ, ತೃತೀಯ ಸ್ಥಾನವನ್ನು ಪಡೆದ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು. ಹಾಗೂ ಜಿಲ್ಲಾಮಟ್ಟದ ಸಾಂಸ್ಕೃತಿಕ ಚಟುವಟಿಕೆಯಲ್ಲಿ ಭಾಗವಹಿಸಿ ಬಹುಮಾನವನ್ನು ಪಡೆದ ವಿದ್ಯಾರ್ಥಿಗಳ ತಂಡವನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಸಹಕರಿಸಿದ ಎಲ್ಲರನ್ನು ಸ್ಮರಿಸುತ್ತಾ ಅಭಿನಂಧಿಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕ ವರ್ಗದವರು ಹಾಗೂ ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಜರಿದ್ದು ಕಾರ್ಯಕ್ರಮಕ್ಕೆ ಮೆರುಗನ್ನು ನೀಡಿದರು. ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ವಿವಿಧ ವಿನೋದಾವಳಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು, ಕೊನೆಯಲ್ಲಿ ಧನ್ಯವಾದ ಕಾರ್ಯಕ್ರಮದೊಂದಿಗೆ “ಕ್ರಿಯೇಟಿವ್‌ ಸಮಾಗಮ” ಸಂಪನ್ನಗೊಂಡಿತು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.