logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಕನಕದಾಸ ಜಯಂತಿ

ಟ್ರೆಂಡಿಂಗ್
share whatsappshare facebookshare telegram
28 Nov 2023
post image

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನಕದಾಸ ಸಮಾಜ ಸೇವಾ ಸಂಘ (ರಿ) ಹಾಗೂ ಹಾಲುಮತ ಮಹಾ ಸಭಾ (ರಿ) ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಕನಕದಾಸ ಜಯಂತಿ ಕಾರ್ಯಕ್ರಮವು ನವೆಂಬರ್ 30 ರಂದು ಬೆಳಗ್ಗೆ 10 ಗಂಟೆಗೆ ನಗರದ ಅಜ್ಜರಕಾಡು ಗೋವಿಂದ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರುಗಳಾದ ವಿ ಸುನಿಲ್ ಕುಮಾರ್, ಗುರುರಾಜ್ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಕೋಟ ಶ್ರೀನಿವಾಸ ಪೂಜಾರಿ, ಎಸ್.ಎಲ್.ಭೋಜೆಗೌಡ, ಡಾ.ತೇಜಸ್ವಿನಿ ಗೌಡ ಹಾಗೂ ಮಂಜುನಾಥ ಭಂಡಾರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ ರೇಜು, ಕನಕದಾಸ ಸಮಾಜ ಸಂಘದ ಜಿಲ್ಲಾ ಅಧ್ಯಕ್ಷ ಹನುಮಂತ ಡೊಳ್ಳಿನ, ಹಾಲುಮತ ಮಹಾ ಸಭಾ ಜಿಲ್ಲಾ ಅಧ್ಯಕ್ಷ ಸಿದ್ಧಪ್ಪ ಹೆಚ್ ಐಹೊಳೆ ಹಾಗೂ ಮತ್ತಿತರರು ಭಾಗವಹಿಸಲಿದ್ದು, ಉಡುಪಿ ಸ.ಪ.ಪೂ ಕಾಲೇಜಿನ ಹಿರಿಯ ಉಪನ್ಯಾಸಕಿ ಡಾ. ಸುಮಾ ಎಸ್ ಉಪನ್ಯಾಸ ನೀಡಲಿದ್ದಾರೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.