



ಉಡುಪಿ, : ಕನ್ನಡ ಪುಸ್ತಕ ಪ್ರಾಧಿಕಾರವು ಏಪ್ರಿಲ್ 8 ರಿಂದ 13 ರ ವರೆಗೆ ಧಾರವಾಡ ಕರ್ನಾಟಕ ಕಾಲೇಜು ಆವರಣದಲ್ಲಿ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳವನ್ನು ಏರ್ಪಡಿಸಲಾಗುತ್ತಿದ್ದು, ಪುಸ್ತಕ ಮೇಳದಲ್ಲಿ ಭಾಗವಹಿಸಲು ಕನ್ನಡ ಪ್ರಕಾಶಕರು ಹಾಗೂ ಮಾರಾಟಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 6 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ದೂ.ಸಂಖ್ಯೆ: 080-22484516/22107704 ಅಥವಾ ಪ್ರಾಧಿಕಾರದ ವೆಬ್‌ಸೈಟ್ https://www.kannadapustakapradhikara.com/ ಅಥವಾ ಜಿಲ್ಲೆಯ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಛೇರಿಯನ್ನು ಸಂಪರ್ಕಿಸುವAತೆ ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.