logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಆರು ಅಂಗಡಿಗಳ ಬೀಗ ಮುರಿದು ನಗದು ಕಳ್ಳತನ

ಟ್ರೆಂಡಿಂಗ್
share whatsappshare facebookshare telegram
1 Nov 2022
post image

ಉಡುಪಿ: ಮಣಿಪಾಲ ಹಾಗೂ ಉಡುಪಿ ಠಾಣೆ ವ್ಯಾಪ್ತಿಯಲ್ಲಿ‌ ಸೋಮವಾರ ರಾತ್ರಿ ಸರಣಿ ಕಳ್ಳತನ ನಡೆದಿದೆ. ಕಳ್ಳರು ಆರು ಅಂಗಡಿಗಳ ಬೀಗ ಮುರಿದು, ಅಂಗಡಿಯೊಳಗಿದ್ದ ನಗದು ದೋಚಿಕೊಂಡು ಪರಾರಿಯಾಗಿದ್ದಾರೆ. ಮಣಿಪಾಲ ಠಾಣಾ ವ್ಯಾಪ್ತಿಯ ದೊಡ್ಡಣಗುಡ್ಡೆಯ ಒಂದು ಬಟ್ಟೆ ಮಳಿಗೆ ಮತ್ತು ಮೂರು ಜನರಲ್ ಶಾಪ್, ಉಡುಪಿ ನಗರ ಠಾಣೆ ವ್ಯಾಪ್ತಿಯ ಗುಂಡಿಬೈಲ್‌ನಲ್ಲಿ ಎರಡು ಅಂಗಡಿಗಳ ಬೀಗ ಮುರಿದು ಕಳ್ಳತನ ಮಾಡಿರುವ ಬಗ್ಗೆ ವರದಿಯಾಗಿದೆ. ಉಡುಪಿ ಮತ್ತು ಮಣಿಪಾಲ ಠಾಣೆಯ ಪೊಲೀಸರು ಕಳ್ಳತನ ನಡೆದ ಅಂಗಡಿಗಳಿಗೆ ಬೆಳಿಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೀಗ ಮುರಿದು ಒಳ ನುಗ್ಗಿದ ಕಳ್ಳರು ಅಂಗಡಿಗಳಲ್ಲಿದ್ದ ಸಾವಿರಾರು ರೂಪಾಯಿ ನಗದು ದೋಚಿ ಪರಾರಿಯಾಗಿದ್ದಾರೆ. ಮಣಿಪಾಲ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.