ಉಡುಪಿ: ನಗರದ ಮೈತ್ರಿ ಕಾಂಪ್ಲೆಕ್ಸ್ನ ಮೊದಲನೇ ಮಹಡಿಯ ಮುತ್ತೂಟ್ ಫೈನಾನ್ಸ್ ಇಲ್ಲಿ ಮಾರ್ಚ್ 29 ರಂದು ಬೆಳಗ್ಗೆ 10.30 ಕ್ಕೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿ ಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉದ್ಯೋಗ ವಿನಿಮಯ ಕೇಂದ್ರದ ಜಿಲ್ಲಾ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.