



ಉಡುಪಿ, :ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ 75 ನೇ ಭಾರತ ಸ್ವಾತಂತ್ರö್ಯದ ಅಮೃತ ಮಹೋತ್ಸವದ ಅಂಗವಾಗಿ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮವು ಮೇ 28 ರಂದು ಬೆಳಗ್ಗೆ 10 ಗಂಟೆಗೆ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಪ್ರತಾಪ್ ಸಿಂಹ ಉಪನ್ಯಾಸ ನೀಡಲಿದ್ದಾರೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಸಂಸದ ಬಿ.ವೈ.ರಾಘವೇಂದ್ರ, ಮಂಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರುಗಳಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಲಾಲಾಜಿ.ಆರ್.ಮೆಂಡನ್, ಬಿ.ಎಂ.ಸುಕುಮಾರ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಆಯನೂರು ಮಂಜುನಾಥ, ಎಸ್.ಎಲ್.ಭೋಜೆಗೌಡ, ಡಾ||ತೇಜಸ್ವಿನಿ ಗೌಡ, ಮಂಜುನಾಥ ಭಂಡಾರಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್ ಕಲ್ಮಾಡಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಹಾಗೂ ಮತ್ತಿತರರು ಉಪಸ್ಥಿತರಿರಲಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.