



ಉಡುಪಿ, : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಬೈಂದೂರು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ವೈದ್ಯಾಧಿಕಾರಿ – 2 ಹುದ್ದೆಗಳಿಗೆ (ಪ.ಜಾತಿ-1, ಸಾ.ಅ-1 ಹುದ್ದೆ) ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಅಥವಾ ನೇರ ನೇಮಕಾತಿ ಆಗುವವರೆಗೆ / ಖಾಯಂ ವೈದ್ಯರು ವರ್ಗಾವಣೆಯಿಂದ ಹುದ್ದೆ ಭರ್ತಿಯಾಗುವವರೆಗೆ ನೇಮಕಾತಿ ಮಾಡಿಕೊಳ್ಳಲು ಎಂ.ಬಿ.ಬಿ.ಎಸ್ ವಿದ್ಯಾರ್ಹತೆ ಹೊಂದಿದ ಅರ್ಹ ವೈದ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 27 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿ, ಜಿಲ್ಲಾ ಆಸ್ಪತ್ರೆ, ಅಜ್ಜರಕಾಡು, ಉಡುಪಿ ದೂ.ಸಂಖ್ಯೆ: 0820-2536650 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.