



ಉಡುಪಿ: ಫೆಬ್ರವರಿ 12 ರಂದು ಬೆಳಗ್ಗೆ 10:30 ಕ್ಕೆ ನಗರದ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿoಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: ೮೧೦೫೬೧೮೨೯೧, ೯೯೪೫೮೫೬೬೭೦, ೯೯೦೧೪೭೨೭೧೦ ಮತ್ತು ೮೧೦೫೭೭೪೯೩೬ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.