



ಉಡುಪಿ,: ರಾಜ್ಯದ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅವರು ಏಪ್ರಿಲ್ 10, 11, 13 ಹಾಗೂ 14 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಏ. 10 ರಂದು ರಾತ್ರಿ ಉಡುಪಿಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ. ಏ. 11 ರಂದು ಮಾನ್ಯ ಮುಖ್ಯಮಂತ್ರಿಗಳೊAದಿಗೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ನಂತರ ಸಿಗಂಧೂರಿಗೆ ತೆರಳಲಿರುವರು. ಏ. 13 ರಂದು ಸಂಜೆ ಉಡುಪಿಗೆ ಆಗಮಿಸಿ, ವಾಸ್ತವ್ಯ ಮಾಡಲಿದ್ದು, ಏ. 14 ರಂದು ಬೆಳಗ್ಗೆ 9 ಗಂಟೆಗೆ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಹಾವೀರ ಜಯಂತಿ ಹಾಗೂ 10 ಗಂಟೆಗೆ ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ರವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಮಂಗಳೂರಿಗೆ ತೆರಳಲಿರುವರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.