



ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕರಲ್ಲಿ ಒಬ್ಬರಾದ ಮಿರ್ಜಾ ಇಸ್ಮಾಯಿಲ್ ಇವರ ಹುಟ್ಟು ಹಬ್ಬವನ್ನು ಮಂಗಳವಾರ ಉಡುಪಿಯ ಸಾಹಿತ್ಯ ಪರಿಷತ್ತು ಕಚೇರಿಯಲ್ಲಿ ಆಚರಿಸಲಾಯಿತು. ಮಿರ್ಜಾ ಇಸ್ಮೈಲ್ ಅವರ ಮಾನವೀಯ ಗುಣಗಳನ್ನು ಗೌರವ ಕಾರ್ಯದರ್ಶಿಯಾದ ಸುಬ್ರಹ್ಮಣ್ಯ ಶೆಟ್ಟಿ, ಕಾರ್ಯದರ್ಶಿ ಆನಂದ್ ಪಿ., ಹಾಗೂ ನರಸಿಂಹಮೂರ್ತಿಯವರು ಕೊಂಡಾಡಿದರು.
ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಭಿಯಂತರರಾದ ಶ್ರೀನಾಥ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಭಾಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆಯ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ವಹಿಸಿದ್ದರು. ಆನಂದ್ ಪಿ. ಸ್ವಾಗತಿಸಿದರು, ಕಸಾಪ ಉಡುಪಿ ತಾಲೂಕು ಘಟಕದ ಅಧ್ಯಕ್ಷರಾದ ರವಿರಾಜ್ ಎಚ .ಪಿ ಧನ್ಯವಾದ ನೀಡಿದರು. ಜಿಲ್ಲಾ ಗೌರವ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ,ಸಂಘಟನಾ ಕಾರ್ಯದರ್ಶಿ ಸತೀಶ್ ವಡ್ದರ್ಸೆ, ಕಸಾಪ ಹೆಬ್ರಿ ತಾಲೂಕು ಅಧ್ಯಕ್ಷ ಶ್ರೀನಿವಾಸ್ ಭಂಡಾರಿ, ತಾಲೂಕು ಕೋಶಾಧ್ಯಕ್ಷ ರಾಜೇಶ್ ಭಟ್ಪ ಪಣಿಯಾಡಿ , ಸುಭೋದ್ ಕುಮಾರ್, ಶಶಿಕಾಂತ್ ಶೆಟ್ಟಿ, ಈರಣ್ಣ ಕುರುವತ್ತಿ ಗೌಡ ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.